ಸಂಗ್ರಹ ಚಿತ್ರ 
ರಾಜ್ಯ

ಮದುವೆಗೆ ನಕಾರ: ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ತನ್ನನ್ನು ವಿವಾಹವಾಗಲು ಪ್ರೀತಿಸಿದ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕೆಯ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ತನ್ನನ್ನು ವಿವಾಹವಾಗಲು ಪ್ರೀತಿಸಿದ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕೆಯ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ಬುಧವಾರ ನಡೆದಿದೆ.

ರಾಕೇಶ್ (27) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಬುಧವಾರ ಮಧ್ಯಾಹ್ನ ಯುವತಿಯ ಮನೆಗೆ ಹೋಗಿರುವ ರಾಕೇಶ್ ಜಗಳ ಮಾಡಿದ್ದಾನೆ. ಮಾತಿನ ಚಕಮಕಿ ವೇಳೆ ಆಕೆಯ ಮನೆಯಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಕೂಡಲೇ ಯುವನನ್ನು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಗುರುವಾರ ಮೃತಪಟ್ಟಿದ್ದಾನೆ.

ರಾಕೇಶ್ ಈ ಹಿಂದೆ ತನ್ನ ಪೋಷಕರಿಗೆ ವಿಚಾರ ತಿಳಿಸಿ, ಹುಡುಗಿ ಕೇಳುವಂತೆ ಯುವತಿಯ ಮನೆಗೆ ಕಳುಹಿಸಿದ್ದಾನೆ. ಆದರೆ, ಯುವತಿಯ ಮನೆಯವರು ಮದುವೆಗೆ ನಿರಾಕರಿಸಿದ್ದಾರೆ. ಇದಾದ ಬಳಿಕ ಯುವತಿ ರಾಕೇಶ್ ನಿಂದ ದೂರಾಗಲು ಪ್ರಾರಂಭಿಸಿದ್ದಳು. ಇದರಿಂದ ನೊಂದಿದ್ದ ರಾಕೇಶ್ ಬುಧವಾರ ಮಧ್ಯಾಹ್ನ ಆಕೆಯ ಮನೆಗೆ ಹೋಗಿದ್ದಾನೆ. ಈ ವೇಳೆ ಯುವತಿಯ ಮನೆಯವರು ಬೆದರಿಸಿ, ಹಲ್ಲೆ ನಡೆಸಿದ್ದಾರು ಎಂದು ತಿಳಿದುಬಂದಿದೆ. ಈ ಸಂಬಂಧ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT