ಸ್ಪೀಕರ್ ಖಾದರ್ ಸೂಚನೆ 
ರಾಜ್ಯ

ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ: ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆ

ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.

ಬೆಳಗಾವಿ: ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇತರ ಕೆಲವು ಶಾಸಕರು ವಿಧಾನಸಭೆಯಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರವನ್ನು ತೆಗೆಯಬೇಕು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರು ಮತ್ತು ಸಚಿವರು ಅಧಿವೇಶನಕ್ಕೆ ಸರಿಯಾದ ಸಮಯಕ್ಕೆ ಬರಬೇಕು. ಉತ್ತಮವಾಗಿ ಚರ್ಚೆ ನಡೆಸುವುದು, ಯೋಜನೆ ರೂಪಿಸುವುದು ಅವರ ಕೆಲಸ. ಅವರ ಕೆಲಸವನ್ನು ಅವರು ಚೆನ್ನಾಗಿ ಮಾಡಲಿ. ಯಾರು ಯಾವ ಕೆಲಸ ಮಾಡಬೇಕೋ ಅದೇ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಸುವುದು ಸರಿಯಲ್ಲ, ಶಾಸಕರು, ಸಚಿವರು ವಿವಾದ ಸೃಷ್ಟಿಸುವ ಬದಲು ಜನರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು. ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

‘ಹಿಂದೆ ಏನು ಆಗಿದೆಯೋ ಅದರ ಬಗ್ಗೆ ವಿಮರ್ಶೆ ಮಾಡುವುದಿಲ್ಲ. ರಾಜ್ಯದಲ್ಲಿ ಸೌಹಾರ್ದ ಮೂಡಿಸುವುದು ನನ್ನ ಕೆಲಸ. ಯಾವುದನ್ನೂ ಕಿತ್ತು ಎಸೆಯುವುದು ನನ್ನ ಕೆಲಸವಲ್ಲ. ಅದರ ಬದಲಿಗೆ ಬೆಸೆಯುವುದು ನನ್ನ ಕೆಲಸ. ಸೌಹಾರ್ದ ಮೂಡಿಸುವುದೇ ನನ್ನ ಆದ್ಯತೆ. ನಾನು ಸಾಂವಿಧಾನಿಕ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT