ರಾಯಚೂರು: ಹಾಸ್ಟೆಲ್ ಊಟ ಸೇವಿಸಿದ ನಂತರ 14 ವಿದ್ಯಾರ್ಥಿಯರು ಅಸ್ವಸ್ಥ
ಹಾಸ್ಟೆಲ್ನಲ್ಲಿ ಊಟ ಸೇವಿಸಿದ ನಂತರ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ರಾಯಚೂರು: ಹಾಸ್ಟೆಲ್ನಲ್ಲಿ ಊಟ ಸೇವಿಸಿದ ನಂತರ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ಅಸ್ವಸ್ಥಗೊಂಡಿರುವ ಮೆಟ್ರಿಕ್ ಪೂರ್ವ ಹಾಸ್ಟೆಲ್ ನ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿನಿ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 14 ವಿದ್ಯಾರ್ಥಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರೂ ವಾರ್ಡನ್ ಹಾಸ್ಟೆಲ್ಗೆ ಆಗಮಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.