ಖಾಸಗಿ ಬಸ್ ಪಲ್ಟಿ 
ರಾಜ್ಯ

ಚಿತ್ರದುರ್ಗ: ಹೊಳಲ್ಕೆರೆ ಬಳಿ ಬಸ್ ಪಲ್ಟಿಯಾಗಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ದಾವಣಗೆರೆಯಲ್ಲಿ ನಿಶ್ಚಯವಾಗಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಶನಿವಾರ ಸಂಜೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಚಿತ್ರದುರ್ಗ: ದಾವಣಗೆರೆಯಲ್ಲಿ ನಿಶ್ಚಯವಾಗಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಶನಿವಾರ ಸಂಜೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬಸ್ ಹೊಸದುರ್ಗ ತಾಲ್ಲೂಕಿನ ಸೀಗೆಹಟ್ಟಿ ಗ್ರಾಮದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 40 ವರ್ಷದ ಮಂಜುನಾಥ್ ಎಂಬುವವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸದುರ್ಗಾದಿಂದ ಹೊಳಲ್ಕೆರೆ ಕಡೆಗೆ ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನ ಕೆಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅಪಘಾತ ಸ್ಥಳವು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT