ಟಿ.ಎನ್.ಸೀತಾರಾಂ, ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು 
ರಾಜ್ಯ

ಟಿ.ಎನ್. ಸೀತಾರಾಂ ರ 'ನೆನಪಿನ ಪುಟಗಳು' ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಹೆಸರಾಂತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ರಚಿಸಿರುವ 'ನೆನಪಿನ ಪುಟಗಳು' ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದರು.

ಬೆಂಗಳೂರು: ಹೆಸರಾಂತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ರಚಿಸಿರುವ 'ನೆನಪಿನ ಪುಟಗಳು' ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೃತಿ ರಚನೆಕಾರರೊಂದಿಗಿನ ತಮ್ಮ ಒಡನಾಟವನ್ನು ಹಂಚಿಕೊಂಡರು. ತಮ್ಮ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊಫೆಸರ್ ನಂಜುಂಡಸ್ವಾಮಿ ಅವರೇ ಕಾರಣ ಎಂದು ತಿಳಿಸಿದರು. 

ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿ ಅವರು ಕಾನೂನು  ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನಸಭಾದಲ್ಲಿ ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ಭಾಗಿಯಾಗಿದ್ದಾಗಿ ತಿಳಿಸಿದರು.

ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನನಗೆ ಪಕ್ಷದ ನಾಯಕರು ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ಮೇಲೆ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದೆ. ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ನನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದೆ ಎಂದು ನೆನಪಿಸಿಕೊಂಡರು. 

ಟಿ.ಎನ್.ಸೀತಾರಾಂ  ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ, ಕಲಾ ಸೇವೆಯಲ್ಲಿ ತೊಡಗಿರುವ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು ಎಂದು ಮುಖ್ಯಮಂತ್ರಿ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT