ಸಾಂದರ್ಭಿಕ ಚಿತ್ರ 
ರಾಜ್ಯ

ತಮಿಳುನಾಡಿಗೆ ನಿತ್ಯ 3,250 ಕ್ಯೂಸೆಕ್ಸ್ ನೀರು ಕಾವೇರಿ ನೀರು ಹರಿವು!

ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಮೈಚಾಂಗ್ ಚಂಡಮಾರುತದೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಈಶಾನ್ಯ ಮಾನ್ಸೂನ್ ಜೊತೆಗೆ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಿಂದಾಗಿ ಕರ್ನಾಟಕದಿಂದ 3,250-3,300 ಕ್ಯೂಸೆಕ್‌ನಷ್ಟು ಕಾವೇರಿ ನೀರನ್ನು ಹರಿಸಲಾಗುತ್ತಿದೆ.

ಬೆಂಗಳೂರು: ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಮೈಚಾಂಗ್ ಚಂಡಮಾರುತದೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಈಶಾನ್ಯ ಮಾನ್ಸೂನ್ ಜೊತೆಗೆ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಿಂದಾಗಿ ಕರ್ನಾಟಕದಿಂದ 3,250-3,300 ಕ್ಯೂಸೆಕ್‌ನಷ್ಟು ಕಾವೇರಿ ನೀರನ್ನು ಹರಿಸಲಾಗುತ್ತಿದೆ. ಕಾವೇರಿ ನೀರು ಬಿಡುವ ಕುರಿತು ತೀವ್ರ ವಿರೋಧ ವ್ಯಕ್ತವಾಗಿದ್ದರೂ ಉತ್ತಮ ಮಳೆಯಿಂದಾಗಿ ತಮಿಳುನಾಡಿಗೆ ನಿತ್ಯ 3,250-3,300 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಮೂಲಗಳು ಹೇಳುವಂತೆ ಇದನ್ನು ಕಬಿನಿ ಅಥವಾ ಕೆಆರ್‌ಎಸ್ ಅಣೆಕಟ್ಟುಗಳಿಂದ ಹರಿಸಲಾಗುತ್ತಿಲ್ಲ. ಆದರೆ ಕೆಆರ್‌ಎಸ್ ಮತ್ತು ಕಬಿನಿ ನಡುವಿನ ವಲಯದಲ್ಲಿ ಬಿಳಿಗುಂಡ್ಲುವಿಗೆ ಹೆಚ್ಚುವರಿ ನೀರು ಹರಿಯುತ್ತಿದೆ. ಅಕ್ಟೋಬರ್ 1 ರಿಂದ ಇಲ್ಲಿಯವರೆಗೆ ಬೆಂಗಳೂರಿನಲ್ಲಿ ಸುಮಾರು 200 ಮಿ. ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿದ್ದು, ಈ ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಈಶಾನ್ಯ ಮಾನ್ಸೂನ್ ಮತ್ತು ಹವಾಮಾನ ವೈಫರೀತ್ಯದಿಂದ ಸಾಕಷ್ಟು ಪ್ರಮಾಣದ ಮಳೆಯಾಗಿದೆ.

ಸೆಪ್ಟೆಂಬರ್-ಅಂತ್ಯದಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೆಪ್ಟೆಂಬರ್ 27 ಕ್ಕೆ ಕೊನೆಗೊಂಡ ಹದಿನೈದು ದಿನಗಳಲ್ಲಿ ಸಂಗ್ರಹವಾಗಿರುವ 0.7 ಟಿಎಂಸಿ ಅಡಿ ಕೊರತೆಯನ್ನು ಸರಿದೂಗಿಸಲು ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ತಿಳಿಸಿತು. ನೈಋತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ನೀರಿನ ಇಳುವರಿಯಲ್ಲಿ ಕೊರತೆ ಉಂಟಾಗಿರುವುದರಿಂದ ನೀರು ಬಿಡುವುದು ಕಷ್ಟ ಎಂದು ಕರ್ನಾಟಕ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT