ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯದಲ್ಲಿ ಅಕ್ರಮ ಟವರ್‌ಗಳು: ಟೆಲಿಕಾಂ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಈ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು. ಈ ಮೂಲಕ ರಾಜ್ಯವು 7,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಸಿದ್ದರಾಮಯ್ಯ ಅವರು ಈ ನಿರ್ದೇಶನ ನೀಡಿದ್ದಾರೆ. 

ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಷನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಟವರ್ ಅಳವಡಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ., ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ., ನಗರ ಪುರಸಭೆ ವ್ಯಾಪ್ತಿಯಲ್ಲಿ 35,000 ರೂ. ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ 8.000 ರೂ. ನೀಡಬೇಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 8,000 ಟವರ್‌ಗಳು ಇದ್ದು, ರಾಜ್ಯದಾದ್ಯಂತ 48,000 ಇವೆ ಎಂದು ರಮೇಶ್ ತಿಳಿಸಿದ್ದಾರೆ.

ಅವುಗಳಲ್ಲಿ ಹಲವು ಇನ್‌ಸ್ಟಾಲೇಷನ್ ಶುಲ್ಕವನ್ನು ಪಾವತಿಸದೆ ಸ್ಥಾಪಿಸಲಾಗಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ. ಹೀಗಾಗಿ, ಇತರೆ ತೆರಿಗೆಯೊಂದಿಗೆ ಟವರ್ ಇನ್‌ಸ್ಟಾಲೇಷನ್ ಶುಲ್ಕವನ್ನು ಸಹ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಗೆ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತಿದ್ದು, ಕರ್ನಾಟಕ ಕೂಡ ಈ ಶುಲ್ಕವನ್ನು ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT