ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ವಕೀಲರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ಕಲಬುರಗಿ ಜಿಲ್ಲಾ ಕೇಂದ್ರ ಪಟ್ಟಣದಲ್ಲಿ ವಕೀಲರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಡಿಸೆಂಬರ್ 7ರಂದು ಹಗಲು ಹೊತ್ತಿನಲ್ಲೇ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ ಬಳಿ ಈರಣ್ಣಗೌಡ ಪಾಟೀಲ್‌ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. 

ಕಲಬುರಗಿ: ಕಲಬುರಗಿ ಜಿಲ್ಲಾ ಕೇಂದ್ರ ಪಟ್ಟಣದಲ್ಲಿ ವಕೀಲರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಡಿಸೆಂಬರ್ 7ರಂದು ಹಗಲು ಹೊತ್ತಿನಲ್ಲೇ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ ಬಳಿ ಈರಣ್ಣಗೌಡ ಪಾಟೀಲ್‌ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿ ನೀಲಕಂಠ ಪಾಟೀಲ್ ಸ್ಥಳದಿಂದ ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಂತ್ರಸ್ತರನ್ನು ಬೆನ್ನಟ್ಟುತ್ತಿರುವ ದೃಶ್ಯ ಕ್ಯಾಮರಾದಲ್ಲಿ ದಾಖಲಾಗಿತ್ತು. ಶನಿವಾರ ಪೊಲೀಸರು ಆರೋಪಿ ನೀಲಕಂಠನನ್ನು ಬಂಧಿಸಿರುವುದಾಗಿ ಹೇಳಿದ್ದರೂ, ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಆದರೆ, ಆಸ್ತಿ ಸಂಬಂಧಿತ ಸಮಸ್ಯೆಯೇ ಬರ್ಬರ ಹತ್ಯೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈರಣ್ಣಗೌಡ ಪಾಟೀಲ ಹತ್ಯೆ ಖಂಡಿಸಿ ಕಲಬುರಗಿ ಸೇರಿದಂತೆ ಹಲವು ಪಟ್ಟಣಗಳಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ