ದರ್ಶನ್ 
ರಾಜ್ಯ

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ದರ್ಶನ್ ಹೊರಗಿಟ್ಟು ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರ ನಿರ್ಧಾರ?

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್ ಮನೆಯ ನಾಯಿ ವೈದ್ಯೆ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದಾಗ ನಟ ದರ್ಶನ್ ಘಟನಾ ಸ್ಥಳದಲ್ಲಿ ಇರಲಿಲ್ಲ. ನಾಯಿ ದಾಳಿಯ ದಿನ ದರ್ಶನ್ ಹೊರ ರಾಜ್ಯದಲ್ಲಿ ಶೂಟಿಂಗ್‌ನಲ್ಲಿ  ಭಾಗಿಯಾಗಿದ್ದರು. ದರ್ಶನ್‌ ಹೊರಗಡೆ ಇರುವುದನ್ನು ಟವರ್ ಲೋಕೇಷನ್ ಮೂಲಕ ಪೊಲೀಸರು ಖಾತ್ರಿ ಪಡಿಸಿಕೊಂಡಿದ್ದಾರೆ.

ದರ್ಶನ್ ನಾಯಿ ನೋಡಿಕೊಳ್ಳಲು ಕೆಲಸದವರನ್ನು ನೇಮಕ ಮಾಡಿದ್ದರು. ಮಹಿಳೆ ದರ್ಶನ್ ವಿರುದ್ಧ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಗಳಿಲ್ಲ. ಕೆಲಸದ ವ್ಯಕ್ತಿ ಮಾಡಿರುವ ತಪ್ಪಿಗೆ  ಮಾಲೀಕನನ್ನು ಆರೋಪಿ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ