ರಾಜ್ಯ

ಮೈಸೂರು: ಗ್ರಾಮಗಳ ಸುತ್ತ ಕಾಣಿಸಿಕೊಂಡ ಹುಲಿ ಸೆರೆಹಿಡಿಯಲು ಕಾರ್ಯಾಚರಣೆ, ವಿಶೇಷ ತಂಡ ರಚನೆ

Ramyashree GN

ಮೈಸೂರು: ಜಿಲ್ಲೆಯಲ್ಲಿ ಭೀತಿ ಹುಟ್ಟಿಸಿರುವ ಹುಲಿಯನ್ನು ಸೆರೆಹಿಡಿಯಲು ಅಧಿಕಾರಿಗಳು ಸೋಮವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ಚಿಕ್ಕಕಾನ್ಯ, ದೊಡ್ಡಕಾನ್ಯ, ಬ್ಯಾತಹಳ್ಳಿ ಮತ್ತು ಸಿಂಧುವಳ್ಳಿ ಗ್ರಾಮದ ಸುತ್ತಮುತ್ತಲು ಇತ್ತೀಚೆಗೆ ಹಲವು ಬಾರಿ ಹುಲಿ ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಗ್ರಾಮಸ್ಥರಲ್ಲಿ ಭೀತಿ ಸೃಷ್ಟಿಸಿರುವ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಿದೆ.

ಮುಂದಿನ ನಿರ್ದೇಶನದವರೆಗೆ ಗ್ರಾಮಸ್ಥರು ಹೊರಗೆ ಹೋಗದಂತೆ ಮತ್ತು ಕಾರ್ಯಾಚರಣೆಗೆ ಸಹಕರಿಸುವಂತೆ ಅಧಿಕಾರಿಗಳು ಕೋರಿದ್ದಾರೆ.

ನವೆಂಬರ್ 24 ರಂದು ಹೆಡಿಯಾಲ ಅರಣ್ಯ ವ್ಯಾಪ್ತಿಯ ಬಳ್ಳೂರುಹುಂಡಿ ಬಳಿ 55 ವರ್ಷದ ರತ್ನಮ್ಮ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದರು. ಆದರೆ, ಈ ಹುಲಿಯನ್ನು ಸೆರೆಹಿಡಿದು ಮೈಸೂರು ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ.

ಹುಲಿಯನ್ನು ಸೆರೆಹಿಡಿಯಲು ಅಧಿಕಾರಿಗಳು ಮೂರು ಪಳಗಿದ ಆನೆಗಳು, ಡ್ರೋನ್‌ಗಳು ಮತ್ತು ಟ್ರ್ಯಾಪ್ ಕ್ಯಾಮೆರಾಗಳನ್ನು ಬಳಸಿದ್ದಾರೆ ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

SCROLL FOR NEXT