ಬಿಎಂಟಿಸಿ ಬಸ್ 
ರಾಜ್ಯ

ಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಳೆದ ತಿಂಗಳು ವಿವಿಧ ಉಲ್ಲಂಘನೆಗಳಿಗಾಗಿ 3,767 ಪ್ರಯಾಣಿಕರಿಗೆ ದಂಡ ವಿಧಿಸಿದೆ ಮತ್ತು 7 ಲಕ್ಷ ರೂ.ಗೂ ಹೆಚ್ಚು ದಂಡವನ್ನು ಸಂಗ್ರಹಿಸಿದೆ ಎಂದು ಮಂಗಳವಾರ ತಿಳಿಸಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಳೆದ ತಿಂಗಳು ವಿವಿಧ ಉಲ್ಲಂಘನೆಗಳಿಗಾಗಿ 3,767 ಪ್ರಯಾಣಿಕರಿಗೆ ದಂಡ ವಿಧಿಸಿದೆ ಮತ್ತು 7 ಲಕ್ಷ ರೂ.ಗೂ ಹೆಚ್ಚು ದಂಡವನ್ನು ಸಂಗ್ರಹಿಸಿದೆ ಎಂದು ಮಂಗಳವಾರ ತಿಳಿಸಿದೆ.

ಪ್ರಯಾಣಿಕರ ಟಿಕೆಟ್ ರಹಿತ ಪ್ರಯಾಣವನ್ನು ಪತ್ತೆಹಚ್ಚಲು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಬಸ್‌ಗಳ ತಪಾಸಣೆಯನ್ನು ತನ್ನ ಸಿಬ್ಬಂದಿ ತೀವ್ರಗೊಳಿಸಿದ್ದಾರೆ ಎಂದು ಬಿಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

ನವೆಂಬರ್‌ನಲ್ಲಿ, ಸಿಬ್ಬಂದಿ 16,421 ಟ್ರಿಪ್‌ಗಳನ್ನು ಪರಿಶೀಲಿಸಿದ್ದು, 3,329 ಟಿಕೆಟ್‌ರಹಿತ ಪ್ರಯಾಣಿಕರನ್ನು ಗುರುತಿಸಿದ್ದಾರೆ. ಅವರಿಂದ 6,68,610 ರೂ. ದಂಡ ವಸೂಲಿ ಮಾಡಿದ್ದಾರೆ ಮತ್ತು ಕರ್ತವ್ಯಲೋಪಕ್ಕಾಗಿ ಕಂಡಕ್ಟರ್‌ಗಳ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ಮಹಿಳಾ ಪ್ರಯಾಣಿಕರಿಗೆ ಮೀಸಲಾದ ಸೀಟುಗಳನ್ನು ಆಕ್ರಮಿಸಿಕೊಂಡ 438 ಪುರುಷ ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಗಳಿಗೆ ಅನುಗುಣವಾಗಿ 43,800 ರೂ. ದಂಡ ಸಂಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?