ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳು. 
ರಾಜ್ಯ

ಸಮುದಾಯಕ್ಕೆ 2ಎ ಮೀಸಲಾತಿ; ಇಂದು ಬೆಳಗಾವಿಯಲ್ಲಿ ಪಂಚಸಾಲಿಗಳ ಪ್ರತಿಭಟನೆ

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಸ್ವಾಮಿ ನೇತೃತ್ವದ ನಿಯೋಗ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಮಂಗಳವಾರ ನಡೆದ ಸಭೆ ವಿಫಲಗೊಂಡಿದೆ, ಇದರಿಂದ ಇಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಪಂಚಮಸಾಲಿ ಮುಖಂಡರು ನಿರ್ಧರಿಸಿದ್ದಾರೆ.

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಸ್ವಾಮಿ ನೇತೃತ್ವದ ನಿಯೋಗ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಮಂಗಳವಾರ ನಡೆದ ಸಭೆ ವಿಫಲಗೊಂಡಿದೆ, ಇದರಿಂದ ಇಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಪಂಚಮಸಾಲಿ ಮುಖಂಡರು ನಿರ್ಧರಿಸಿದ್ದಾರೆ.

ಮೀಸಲಾತಿ ವಿಚಾರವಾಗಿ ಜಗದ್ಗುರು ಜಯಬಸವ ಮೃತ್ಯುಂಜಯ ಸ್ವಾಮಿಗಳ ನೇತೃತ್ವದ ಪಂಚಮಸಾಲಿ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಅವರು  ನಿನ್ನೆ ಸಭೆ ನಡೆಸಿದರು.

ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಗಿದ ನಂತರ ಮೀಸಲಾತಿ ವಿಚಾರವಾಗಿ ಕಾನೂನು ತಜ್ಞರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ಪಂಚಮಸಾಲಿಗಳ ನಿಯೋಗಕ್ಕೆ ಭರವಸೆ ನೀಡಿದರು.

ನಿಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ವಿಜಯಾನಂದ ಕಾಶಪ್ಪನವರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ವಿನಯ್ ಕುಲಕರ್ಣಿ, ಶಾಸಕ ಸಿಸಿ ಪಾಟೀಲ್, ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ ಇದ್ದರು.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಪಂಚಮಸಾಲಿ ಮುಖಂಡರು ಸಭೆ ನಡೆಸಿ ಬುಧವಾರ ಪ್ರತಿಭಟನೆ ನಡೆಸಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಹಲವಾರು ಶಾಸಕರು ಪ್ರತಿಭಟನೆಯನ್ನು ಮುಂದುವರೆಸುವ ಬಗ್ಗೆ ವಿಭಿನ್ನ ಅಭಿಪ್ರಪಾಯಗಳನ್ನು ವ್ಯಕ್ತಪಡಿಸಿದರು. ಆದರೆ, ಅಂತಿಮವಾಗಿ ಬುಧವಾರ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡರು.
    
ಇಂದು ನಡೆಯುವ ಪ್ರತಿಭಟನೆಯಲ್ಲಿ ನಾಯಕರು ಮುಂದಿನ ನಡೆ ಬಗ್ಗೆಯೂ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT