ಕಲಬುರಗಿಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ಎಂಎಲ್ಸಿ ತಾಯಿ ಸಾವು
ಕಲಬುರಗಿಯ ಸೇಡಂ ರಿಂಗ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರ ತಾಯಿ ಬಲಿಯಾಗಿದ್ದಾರೆ.
ಕಲಬುರಗಿ: ಕಲಬುರಗಿಯ ಸೇಡಂ ರಿಂಗ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರ ತಾಯಿ ಬಲಿಯಾಗಿದ್ದಾರೆ.
ಇಂದು ಸೇಡಂ ರಿಂಗ್ ರಸ್ತೆಯಲ್ಲಿರುವ ಟೊಯೋಟಾ ಶೋರೂಂ ಬಳಿ ಈ ಅಪಘಾತ ಸಂಭವಿಸಿದ್ದು, ಅರವಿಂದ ಅರಳಿ ಅವರ ತಾಯಿ ಸುಮಿತ್ರಾಬಾಯಿ ಅವರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಬೈಕ್ ಗುದ್ದಿದ ರಭಸಕ್ಕೆ ಸುಮೀತ್ರಾಬಾಯಿ(75) ಅವರು ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುಮಿತ್ರಾಬಾಯಿ ಅವರು ಬೀದರ್ ನಿಂದ ಕಲಬುರಗಿಯ ಬಿದ್ದಾಪುರ ಕಾಲೋನಿಯಲ್ಲಿರುವ ಅಳಿಯನ ಮನೆಗೆ ಆಗಮಿಸಿದ್ದ ವೇಳೆ ಅಪಘಾತ ನಡೆದಿದೆ.
ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಾಗಿದೆ.