ಸರ್ಕಾರಿ ಶಾಲೆಯೊಂದರ ಸ್ಥಿತಿ 
ರಾಜ್ಯ

ರಾಜ್ಯದ ಹಲವು ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಸಾಹಿತ್ಯ ಪರಿಷತ್ ಮುಂದು

ಸಮನ್ವಯ ವಿಧಾನಗಳ ಮೂಲಕ ಇಲ್ಲಿಯವರೆಗೆ ಕನ್ನಡ ಭಾಷೆ ಉಳಿವು ಬೆಳವಣಿಗೆಗಾಗಿ ಹೋರಾಟ ನಡೆಸುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ತು (KSP) ಕರ್ನಾಟಕದಲ್ಲಿ ಈಗ ಕನ್ನಡ ಶಾಲೆಗಳನ್ನು ಉಳಿಸಲು ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಲು ಸಹಾಯ ಮಾಡಲು ಬರಹಗಾರರು, ಶಿಕ್ಷಣ ತಜ್ಞರು ಮತ್ತು ವಕೀಲರು ಸೇರಿದಂತೆ

ಬೆಂಗಳೂರು: ಸಮನ್ವಯ ವಿಧಾನಗಳ ಮೂಲಕ ಇಲ್ಲಿಯವರೆಗೆ ಕನ್ನಡ ಭಾಷೆ ಉಳಿವು ಬೆಳವಣಿಗೆಗಾಗಿ ಹೋರಾಟ ನಡೆಸುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ತು (KSP) ಕರ್ನಾಟಕದಲ್ಲಿ ಈಗ ಕನ್ನಡ ಶಾಲೆಗಳನ್ನು ಉಳಿಸಲು ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಲು ಸಹಾಯ ಮಾಡಲು ಬರಹಗಾರರು, ಶಿಕ್ಷಣ ತಜ್ಞರು ಮತ್ತು ವಕೀಲರು ಸೇರಿದಂತೆ 84 ಪ್ರಮುಖ ವ್ಯಕ್ತಿಗಳನ್ನು ಸಾಹಿತ್ಯ ಪರಿಷತ್ ಆಹ್ವಾನಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಕರ್ನಾಟಕದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳ ಪರಿಸ್ಥಿತಿ ತೀರಾ ಹದಗೆಟ್ಟು ಹೋಗಿವೆ. ಹಲವು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು,  ತರಗತಿ ಕೊಠಡಿಗಳು ಮತ್ತು ಇತರ ಮೂಲಭೂತ ಸೌಕರ್ಯಗಳು ಉತ್ತಮವಾಗಿಲ್ಲ. ಅನೇಕ ಕಡೆಗಳಲ್ಲಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿಯಿದೆ. ಈ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆ ಬಿಡುತ್ತಿದ್ದು, ಇದೇ ರೀತಿ ಮುಂದುವರಿದರೆ ಹಲವು ಕನ್ನಡ ಶಾಲೆಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎನ್ನುತ್ತಾರೆ. 

ಇಷ್ಟು ವರ್ಷ ಕನ್ನಡ ಸಾಹಿತ್ಯ ಪರಿಷತ್ ಸರ್ಕಾರಕ್ಕೆ ಜ್ಞಾಪನಾ ಪತ್ರ ಸಲ್ಲಿಸಿ, ಸಹಿ ಅಭಿಯಾನ ನಡೆಸಿದೆ, ಸಾಹಿತ್ಯ ಸಮ್ಮೇಳನಗಳಲ್ಲಿ ಕನ್ನಡ ಪರ ನಿರ್ಣಯಗಳನ್ನು ಅಂಗೀಕರಿಸಿದೆ. ಕನ್ನಡದ ಬಗ್ಗೆ ಪ್ರತಿಭಟನೆಗಳಲ್ಲಿ ಭಾಗವಹಿಸಿದೆ. ನಮ್ಮ ಶಾಲೆಗಳನ್ನು ಉಳಿಸಲು ನಾವು ಮೊದಲ ಬಾರಿಗೆ ಕಾನೂನು ಹೋರಾಟ ನಡೆಸುತ್ತಿದ್ದೇವೆ. ಶಾಲೆಗಳನ್ನು ಉಳಿಸಲು ನಾವು ನ್ಯಾಯಾಲಯದ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು. 

ನ್ಯಾಯಮೂರ್ತಿ ನಾಗಮೋಹನ್ ದಾಸ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಸಾಹಿತಿ ದೊಡ್ಡರಂಗೇಗೌಡ, ಶಿಕ್ಷಣ ತಜ್ಞರು ಸೇರಿದಂತೆ ಹಲವು ಪ್ರಮುಖರು ಇಂದು ದುಂಡು ಮೇಜಿನ ಸಭೆ ಸೇರಲಿದ್ದಾರೆ.

ಇದೇ ವೇಳೆ  ಈ ತಿಂಗಳು ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡುವ ಸಾಧ್ಯತೆಯಿದೆ. ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ಕೆಲವು ತಿಂಗಳ ಹಿಂದೆಯೇ ದಿನಾಂಕವನ್ನು ಮುಂದೂಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಮಂಡ್ಯ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅದಕ್ಕಾಗಿಯೇ ನಾವು ಅದನ್ನು ಮುಂದೂಡಲು ಬಯಸಿದ್ದೇವೆ. ನಾವು ಸ್ವಯಂಪ್ರೇರಣೆಯಿಂದ ಸಾಹಿತ್ಯ ಸಮ್ಮೇಳನ ಮುಂದೂಡಲು ಕೋರಿದರೂ, ರಾಜ್ಯ ಸರ್ಕಾರವು ದಸರಾಕ್ಕೆ ಕೋಟಿಗಟ್ಟಲೆ ಖರ್ಚು ಮಾಡಿದೆ. ಈಗ ಬೆಂಗಳೂರು ಹಬ್ಬವನ್ನು ಕೂಡ ಅದ್ದೂರಿಯಾಗಿ ಆಚರಿಸುತ್ತಿರುವುದು ಎಷ್ಟು ಸರಿ ಎಂದು ಮಹೇಶ್ ಜೋಶಿ ಕೇಳುತ್ತಾರೆ. 

ಜೋಶಿ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ.

ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಅದಕ್ಕೂ ಮುನ್ನ ಪರೀಕ್ಷೆ ಸಮಯವಾಗಿರುವುದರಿಂದ ಸಾಹಿತ್ಯ ಸಮ್ಮೇಳನ ಅಲ್ಲಿಯವರೆಗೆ ನಡೆಯದಿರಬಹುದು ಎಂದು ಸಾಹಿತ್ಯ ಪರಿಷತ್ ಮೂಲಗಳು ತಿಳಿಸಿವೆ. ಸಮ್ಮೇಳನದಲ್ಲಿ ಭಾಗವಹಿಸುವವರಲ್ಲಿ ಹೆಚ್ಚಿನವರು ಶಿಕ್ಷಕರಾಗಿರುವುದರಿಂದ ಅವರು ಪರೀಕ್ಷೆ, ಲೋಕಸಭೆ ಚುನಾವಣೆ ಸಮಯದಲ್ಲಿ ಮತಗಟ್ಟೆ ಕರ್ತವ್ಯ ಎಂದು ಹಾಜರಾಗದಿರಬಹುದು ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT