ಶ್ವೇತಾ - ದರ್ಶನ್ 
ರಾಜ್ಯ

ಚಿಕ್ಕಮಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ವಿಷ ನೀಡಿ ಕೊಂದ ಪಾಪಿ ಪತಿಯ ಬಂಧನ

ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಚಿಕ್ಕಮಗಳೂರು: ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಶ್ವೇತಾ(30) ಎಂಬ ಮಹಿಳೆ ಏಳು ವರ್ಷಗಳ ಹಿಂದೆ ಆರೋಪಿ ದರ್ಶನ್ ಅವರನ್ನು ಮದುವೆಯಾಗಿದ್ದರು ಮತ್ತು ಈ ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ.

ದರ್ಶನ್ ವೃತ್ತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದು, ಬೆಂಗಳೂರಿನಲ್ಲಿ ಡಯಾಗ್ನೋಸ್ಟಿಕ್ ಕೇಂದ್ರಗಳನ್ನು ಹೊಂದಿದ್ದಾರೆ. ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಮೂರು ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ದೇವವೃಂದ ಗ್ರಾಮಕ್ಕೆ ಬಂದಿದ್ದರು.

ಪತಿ ದರ್ಶನ್ ಅಕ್ರಮ ಸಂಬಂಧ ಹೊಂದಿರುವ ವಿಚಾರ ಪತ್ನಿಗೆ ತಿಳಿದ ನಂತರ ಅವರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿ ತನ್ನ ಪತ್ನಿಗೆ ಸೈನೈಡ್ ವಿಷ ಹಾಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಸೋಮವಾರ ಬೆಳಗ್ಗೆ ದರ್ಶನ್ ಸಹೋದರ, ಶ್ವೇತಾ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ  ಅವರ ಕುಟುಂಬಕ್ಕೆ ತಿಳಿಸಿದ್ದರು ಮತ್ತು ಪತಿ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು.

ಶ್ವೇತಾ ಮನೆಯವರು ದರ್ಶನ್ ಮನೆಗೆ ಬಂದು ನೋಡಿದಾಗ, ಶ್ವೇತಾ ಅವರ ದೇಹದಲ್ಲಿ ಸಣ್ಣ ಗಾಯದ ಗುರುತುಗಳು ಕಂಡು ಬಂದಿದ್ದು, ಭಾನುವಾರ ರಾತ್ರಿ ದರ್ಶನ್ ಮತ್ತು ಶ್ವೇತಾ ನಡುವಿನ ಜಗಳ ಆಕೆಯ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ. ನಂತರ ಈ ಸಂಬಂಧ ತಮ್ಮ ಮಗಳಿಗೆ ದರ್ಶನ್ ವಿಷ ಹಾಕಿ ಸಾಯಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೃತಳ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ಕರುಳಿನಲ್ಲಿ ವಿಷದ ಅಂಶ ಇರುವುದು ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಕೊಲೆ ಪ್ರಕರಣ ದಾಖಲಿಸಿಕೊಂಡು ದರ್ಶನ್‌ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್