ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ 
ರಾಜ್ಯ

ದೇಶದ ಸಂಸತ್ ಭವನವೇ ಸುರಕ್ಷಿತವಿಲ್ಲ, ಇನ್ನು ಗಡಿಗಳ ಸ್ಥಿತಿಯೇನು? ಪ್ರಧಾನಿ ಮೋದಿ ಉತ್ತರಿಸಲೇಬೇಕು: ಸಿಎಂ ಸಿದ್ದರಾಮಯ್ಯ

ಸಂಸತ್ ಭವನದ ಮೇಲಿನ ಆಗಂತುಕರ ಪ್ರವೇಶದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದ ಸಂಸತ್ ಭವನವೇ ಸುರಕ್ಷಿತವಿಲ್ಲ, ಇನ್ನು ದೇಶದ ಗಡಿಗಳ ಸ್ಥಿತಿಯೇನು? ಪ್ರಧಾನಿ ಮೋದಿ ಉತ್ತರಿಸಲೇಬೇಕು ಎಂದು ಹೇಳಿದ್ದಾರೆ.

ಬೆಂಗಳೂರು: ಸಂಸತ್ ಭವನದ ಮೇಲಿನ ಆಗಂತುಕರ ಪ್ರವೇಶದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದ ಸಂಸತ್ ಭವನವೇ ಸುರಕ್ಷಿತವಿಲ್ಲ, ಇನ್ನು ದೇಶದ ಗಡಿಗಳ ಸ್ಥಿತಿಯೇನು? ಪ್ರಧಾನಿ ಮೋದಿ ಉತ್ತರಿಸಲೇಬೇಕು ಎಂದು ಹೇಳಿದ್ದಾರೆ.

ಈ ಕುರಿತು ಟ್ವಿಟರ್ ಮೂಲಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, 'ರಾಷ್ಟ್ರದ ಸಂಸತ್ತಿನ ಭದ್ರತೆಯನ್ನು ಖಾತರಿಪಡಿಸದಿದ್ದಾಗ, ರಾಷ್ಟ್ರದ ಗಡಿಗಳ ಭದ್ರತೆಯ ಬಗ್ಗೆ ಪ್ರಶ್ನೆಗಳು ಸಹಜವಾಗಿ ಉದ್ಭವಿಸುತ್ತವೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ಪ್ರಧಾನಿ ಮೋದಿ ಮೇಲಿದೆ ಎಂದು ಟ್ವೀಟ್ ಮಾಡಿದ್ದಾರೆ.

'ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ.

22 ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT