'ಯುವ ನಿಧಿ' ಯೋಜನೆ ಜನವರಿ 1 ರಿಂದ ಜಾರಿ 
ರಾಜ್ಯ

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಜನವರಿ 1 ರಿಂದ ಜಾರಿ

ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ  ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ...

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ  ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದ್ದಾರೆ.

ಈ ಮುಂಚೆ ಡಿಸೆಂಬರ್ 26 ರಿಂದ 'ಯುವ ನಿಧಿ' ನೋಂದಣಿ ಪ್ರಾರಂಭವಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದ್ದರು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಯೋಜನೆಯು ಜನವರಿ 1, 2024 ರಿಂದ ಜಾರಿಗೆ ಬರಲಿದೆ ಮತ್ತು ಅರ್ಜಿದಾರರು 'ಸೇವಾ ಸಿಂಧು' ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ಮತ್ತು ಅದರಲ್ಲಿ 'ಯುವ ನಿಧಿ' ಕೂಡ ಒಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT