ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪ್ರಶ್ನಿಸಿ ಅರ್ಜಿ: ವಿಚಾರಣೆ ಜ. 5ಕ್ಕೆ ಮುಂದೂಡಿದ ಹೈಕೋರ್ಟ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್
Lingaraj Badiger
Updated On : 16 Dec 2023, 3:28 pm

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರ ವಕೀಲರು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದು, ಈ ಎಲ್ಲಾ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿಗೆ ನೀಡಿದ ಹೈಕೋರ್ಟ್, 2024, ಜನವರಿ 5 ರಂದು ವಿಸ್ತೃತವಾದ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

Advertisement

Advertisement

ಸರ್ಕಾರದ ಕ್ರಮದಿಂದ ಅರ್ಜಿದಾರರಿಗೆ ಹೇಗೆ ತೊಂದರೆಯಾಗಿದೆ ಮತ್ತು ಅರ್ಜಿಯ ಬದಲು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಏಕೆ ಸಲ್ಲಿಸಲಿಲ್ಲ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಪ್ರಶ್ನಿಸಿತು.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ಕೇಸು ವಿರೋಧ ಪಕ್ಷಗಳಿಗೆ ಆಗಲಿದೆಯೇ ರಾಜಕೀಯ ಅಸ್ತ್ರ?​

ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಯಾವುದೇ ವ್ಯಕ್ತಿಗೆ ಯಾವುದೇ ಹಾನಿಯಾಗದಿದ್ದರೂ ವ್ಯಕ್ತಿ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಹೇಳಿದರು.

ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019 ರಂದು ಅನುಮತಿ ನೀಡಿತ್ತು. 

ಸರ್ಕಾರ ಬದಲಾದ ನಂತರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28, 2023 ರಂದು ಹಿಂತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement