ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಂಟಮೂರಿಯಲ್ಲಿ ಪೊಲೀಸರು
Lingaraj Badiger
Updated On : 15 Dec 2023, 11:05 pm

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಎನ್ಎಚ್ಆರ್ ಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.

ಇದನ್ನು ಓದಿ: ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ​

Advertisement

Advertisement

ಪ್ರಕರಣದ ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಿ. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.

ಇದನ್ನು ಓದಿ: ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಪ್ರಕರಣ: ದ್ರೌಪದಿ ವಸ್ತ್ರಾಪಹರಣಕ್ಕಿಂತಲೂ ಕ್ರೂರವಾಗಿದೆ ಎಂದ ಹೈಕೋರ್ಟ್

ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಕರಣ ಸಂಬಂಧ 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement