ಹೊತ್ತಿ ಉರಿದ ಬಸ್ 
ರಾಜ್ಯ

ವಿಜಯಪುರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಜನತಾ ಬಸ್; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಅಪಾಯದಿಂದ ಪಾರು!

ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ ಒಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ ರಾಷ್ಟ್ರೀಯ ಹೆದ್ದಾರಿ 50ರ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಸಮೀಪ ಸಂಚರಿಸುತ್ತಿದ್ದಾಗ ಏಕಾಏಕಿ ಟೈರ್ ಬ್ಲಾಸ್ಟ್ ಆಗಿ ಅವಘಡ ಸಂಭವಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಚಾಲಕ ಬಸ್ ಅನ್ನು  ನಿಲ್ಲಿಸಿದ್ದಾನೆ. ತಕ್ಷಣವೇ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.

ನೋಡ ನೋಡುತ್ತಿದ್ದಂತೆಯೇ ಕ್ಷಣಮಾತ್ರದಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು ಬಸ್ ನಿಂದ ಇಳಿದಿದ್ದರಿಂದ ನಡೆಯಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡಿದ್ದಾರೆ.

ಪ್ರಯಾಣಿಕರು ಬಸ್ ನಿಂದ ಕೆಳಗಿಳಿಯವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಲಗೇಜ್ ಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ಎಲ್ಲರ ಲಗೇಜ್ ಗಳು ಬೆಂಕಿಗಾಹುತಿಯಾಗಿವೆ. ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಲಗೇಜ್ ನಲ್ಲಿ ಇದ್ದವು ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕ‌ದಳದ ಸಿಬ್ಬಂದಿ ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ