ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಸಾಗರ್ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ!

ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಕೆಎಸ್ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಸಿಬ್ಬಂದಿ ಮೇಲೆ ರೋಗಿಯೊಬ್ಬರ ಪುತ್ರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಬೆಂಗಳೂರು: ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಕೆಎಸ್ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಸಿಬ್ಬಂದಿ ಮೇಲೆ ರೋಗಿಯೊಬ್ಬರ ಪುತ್ರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಬಿಲ್ಲಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಕ್ರಮ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಬುಧವಾರ ಸಂಜೆ ಘಟನೆ ನಡೆದಿದ್ದು, ವಿಕ್ರಮ್ ಅವರು ಕೆ.ಎಸ್.ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

43 ವರ್ಷದ ಮಹಿಳೆಯೊಬ್ಬರು ಡಿ.6ರಿಂದ ಬಹು ಅಂಗಾಂಗ ವೈಫಲ್ಯದಿಂದ ಕೆಎಸ್ ಲೇಔಟ್ 1ನೇ ಹಂತದಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಸಂಜೆ ವಿಕ್ರಮ್ ಅವರು ಮಹಿಳೆಯ ಪುತ್ರ ದೀಪಕ್ ಅವರ ಬಳಿ ಬಿಲ್ ಪಾವತಿ ಮಾಡುವಂತೆ ಕೇಳಿದ್ದು, ಇದರಿಂದ ಕೆಂಡಾಮಂಡಲಗೊಂಡಿರುವ ದೀಪತ್ ತನ್ನ ಸ್ನೇಹಿತನೊಂದಿಗೆ ಸೇರಿ ವಿಕ್ರಮ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ವೇಳೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ವಿಕ್ರಮ್ ಅವರನ್ನು ರಕ್ಷಣೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಮುಂದುವರೆದಿದ್ದು, ಮಹಿಳೆಯ ಜೊತೆ ಸಂಬಂಧಿಕರ ಉಪಸ್ಥಿತಿ ಅಗತ್ಯವಿರುವುದರಿಂದ ದೀಪಕ್ ಹಾಗೂ ಆತನ ಸ್ನೇಹಿತನನ್ನು ಇನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು