ಆಸ್ಪತ್ರೆಗೆ ಬಿಜೆಪಿ ನಿಯೋಗ ಭೇಟಿ 
ರಾಜ್ಯ

ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರ ಬಿಜೆಪಿ ನಿಯೋಗ; ಪ್ರತಿಭಟನೆ ನಂತರ ಎಚ್ಚೆತ್ತ ಸರ್ಕಾರ

ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ  ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ  ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

ಬಿಜೆಪಿ ಸತ್ಯ ಶೋಧನಾ ತಂಡದಲ್ಲಿ ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಇದ್ದಾರೆ. ಸದ್ಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಬಳಿಕ ಘಟನಾ ಸ್ಥಳ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಭೇಟಿ ನೀಡಲಿದೆ.

ದಲಿತ ಮಹಿಳೆಯ ಮೇಲಿನ ಅಮಾನವೀಯ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲಾ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಲಿದೆ. ಪ್ರಕರಣದಲ್ಲಿ ಕೇವಲ ಎಂಟು ಆರೋಪಿಗಳನ್ನು ಬಂಧಿಸಿ ಉಳಿದ ಆರೋಪಿಗಳ ಬಂಧನ ಮಾಡದ ಪೊಲೀಸರ ವಿರುದ್ಧವೂ ಆಕ್ರೋಶ  ವ್ಯಕ್ತವಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ಕೊಟ್ಟಿದ್ದಾರೆ. ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಬೆಳಗಾವಿಯಲ್ಲೇ ಮುಖ್ಯಮಂತ್ರಿ ಇದ್ದರೂ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಈ ಎಲ್ಲ ವಿಚಾರಗಳ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ಗೆ ಡ್ಯಾಮೇಜ್ ಮಾಡಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ.

ಬಿಮ್ಸ್ ಆಸ್ಪತ್ರೆಗೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ ಹಿನ್ನೆಲೆ ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ಕೊಡುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಂಜೆಯೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಐವತ್ತು ಸಾವಿರ ರೂ. ಪರಿಹಾರ ಘೋಷಿಸಿದೆ.

ಘಟನೆ ನಡೆದ ಗ್ರಾಮಕ್ಕೆ ನಿನ್ನೆ ಸಂಜೆ ಸ್ಥಳೀಯ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಕುಟುಂಬಸ್ಥರಿಂದ ಮಾಹಿತಿ ಪಡೆದರು. ಇದರ ಬೆನ್ನಲ್ಲೇ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಕಾಕತಿ ಠಾಣೆಯ ಪೊಲೀಸ್ ಇನ್​ಸ್ಪೆಕ್ಟರ್​ ವಿಜಯ್ ಸಿನ್ನೂರ್ ಅವರನ್ನು ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT