ಆರೋಪಿ ಸಭಾ 
ರಾಜ್ಯ

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧಿಸಿದ ಆರ್ ಆರ್ ನಗರ ಪೊಲೀಸರು!

ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ತನ್ನ ಪತ್ನಿಯನ್ನು ವಿಧವೆಯಂತೆ ಬಿಂಬಿಸಿದ ಪತಿಯೊಬ್ಬ ಆಕೆಯನ್ನು ಕೈಗಾರಿಕೋದ್ಯಮಿಯೊಂದಿಗೆ ಕಳುಹಿಸಿ ಆತನನ್ನು ಬಲೆಗೆ ಬೀಳಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬಂಧಿತ ವ್ಯಕ್ತಿಗಳನ್ನು ಖಲೀಮ್, ಸಭಾ, ಓಬೇದ್ ರಕೀಮ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ. ಖಲೀಮ್ ಮತ್ತು ಸಭಾ ವಿವಾಹಿತ ದಂಪತಿ ಕೈಗಾರಿಕೋದ್ಯಮಿ ಅತಿಯುಲ್ಲಾ ಅವರನ್ನು ಬಲೆಗೆ ಬೀಳಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಹನಿಟ್ರ್ಯಾಪ್ ಮಾಡಿ ಹಣ ಪೀಕಲು ಯತ್ನಿಸಿದ್ದು, ಆರೋಪಿ ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಅತೀವುಲ್ಲಾ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ್ದಾನೆ.

ಖಲೀಮ್ ತನ್ನ ಪತ್ನಿ ಸಭಾಳನ್ನು ವಿಧವೆ ಎಂದು ಅತೀವುಲ್ಲಾಗೆ ಪರಿಚಯಿಸಿ ಅವಳನ್ನು ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾನೆ. ಶೀಘ್ರದಲ್ಲೇ, ಅತೀವುಲ್ಲಾ ಮತ್ತು ಸಭಾ ದೈಹಿಕ ಸಂಬಂಧ ಬೆಳೆಸಿಕೊಂಡರು.

ಆರ್‌ಆರ್ ನಗರ ಪ್ರದೇಶದಲ್ಲಿ ಹೋಟೆಲ್ ರೂಂ ಬುಕ್ ಮಾಡಲು ಆಧಾರ್ ಕಾರ್ಡ್‌ನೊಂದಿಗೆ ತನ್ನೊಂದಿಗೆ ಬರುವಂತೆ ಹೇಳಿದ್ದಾಳೆ. ಅತಿವುಲ್ಲಾ ಹೋಟೆಲ್ ಕೋಣೆಗೆ ಪ್ರವೇಶಿಸಿದಾಗ, ಆರೋಪಿಗಳು ಒಳನುಗ್ಗಿ ಈ ಸಂಬಂಧವನ್ನು ಕುಟುಂಬದಿಂದ ಗೌಪ್ಯವಾಗಿಡಲು 6 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್‌ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

SCROLL FOR NEXT