ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ರಜೆ ನೀಡದ್ದಕ್ಕೆ ನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು

ಫ್ಯಾಕ್ಟರಿಯಲ್ಲಿ ರಜೆ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಫ್ಯಾಕ್ಟರಿಯಲ್ಲಿ ರಜೆ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋವಿಂದರಾಜ್ (24) ಆತ್ಮಹತ್ಯೆಗೆ ಶರಣಾದ ಯುವಕ. ಈತ ಪೀಣ್ಯದಲ್ಲಿರುವ ಗಡಿಯಾರ ತಯಾರಿಕೆ ಕಂಪನಿಯೊಂದರಲ್ಲಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಅವರ ತಾಯಿ, ಟಿ. ದಾಸರಹಳ್ಳಿ ಬಳಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರಲ್ಲಿ ಸ್ವಚ್ಛತೆ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಕೊಠಡಿಯೊಂದರಲ್ಲಿ ತಾಯಿ ಜೊತೆ ಗೋವಿಂದರಾಜ್ ವಾಸವಿದ್ದರು ಎಂದು ತಿಳಿದುಬಂದಿದೆ.

ಕಾರ್ಖಾನೆಯಲ್ಲಿ ಕೆಲಸ ಮುಗಿದ ಬಳಿಕ ಗೋವಿಂದರಾಜ್ ಅಪಾರ್ಟ್ ಮೆಂಟ್ ವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದೇ ಕಟ್ಟಡದ ಮಹಡಿ ಮೇಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ಗೋವಿಂದರಾಜ್ ಡೆತ್ ನೋಟ್ ಬರೆದಿಟ್ಟಿದ್ದು, ಪತ್ರದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ಗುರುರಾಜ್ ಹಾಗೂ ಮೇಲ್ವಿಚಾರಕ ರಂಜಪ್ಪ ಹೆಸರನ್ನು ನಮೂದಿಸಿದ್ದಾರೆ.

‘ಕಂಪನಿಯ ವ್ಯವಸ್ಥಾಪಕ ಗುರುರಾಜಪ್ಪ ಹಾಗೂ ಮೇಲ್ವಿಚಾರಕ ನಂಜಪ್ಪ, ನನಗೆ ರಜೆ ನೀಡುತ್ತಿರಲಿಲ್ಲ. ಕೆಲಸದ ಸ್ಥಳದಲ್ಲಿ ಕಿರುಕುಳ ನೀಡುತ್ತಿದ್ದರು. ರಜೆ ಕೇಳಿದ್ದಕ್ಕೆ, ಕೆಲಸದಿಂದ ತೆಗೆಯುವುದಾಗಿ ಬೆದರಿಸಿದ್ದರು. ಹೀಗಾಗಿ ನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಹೇಳಿಕೊಂಡಿದ್ದಾನೆ.

ಈ ಸಂಬಂಧ ಬಾಗಲಗುಂಟೆ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT