ಡಾ. ಶ್ರೀನಿವಾಸ್ ಬಂಧನ 
ರಾಜ್ಯ

ಭ್ರೂಣ ಹತ್ಯೆ ಪ್ರಕರಣ: ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಬಂಧನ

ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸ್​ರ​ನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ: ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸ್​ರ​ನ್ನು ಪೊಲೀಸರು ಬಂಧಿಸಿದ್ದಾರೆ. 

ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾ.ಶ್ರೀನಿವಾಸ್​ ಸೇರಿದಂತೆ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು ನರ್ಸ್​ ಅನಿತಾ ಎ2, ನರ್ಸ್​​ ನೇತ್ರಾ ಎ3, ರೇವತಿ ಎ4 ಮತ್ತು ರಾಧಿಕಾ ಎ5 ಆರೋಪಿಯಾಗಿದ್ದಾರೆ.

ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್​​​ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ತೀವ್ರ ವಿಚಾರಣೆ ನಂತರ ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ