ವಿಧಾನಸಭೆಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನದ ಕೊನೆಯ ದಿನ ಶಾಸಕರ ಚರ್ಚೆ 
ರಾಜ್ಯ

ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮುಕ್ತಾಯ: 17 ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ.ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು.

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸತತ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ತೆರೆಬಿದ್ದಿದೆ. ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಯಿತು ಮತ್ತು 150 ಗಮನ ಸೆಳೆಯುವ ಪ್ರಸ್ತಾಪಗಳನ್ನು ಮಂಡಿಸಲಾಯಿತು ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು. 

ನಿನ್ನೆ ಶುಕ್ರವಾರ ಅಧಿವೇಶನ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸ್ಪೀಕರ್ ಖಾದರ್, ಅಧಿವೇಶನ ಸುಗಮವಾಗಿ ನಡೆಯಿತು. 10 ದಿನಗಳ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತು ಹಲವಾರು ಚರ್ಚೆಗಳು ನಡೆದವು. ಉತ್ತರ ಕರ್ನಾಟಕ ಮತ್ತು ಬರ ಸೇರಿದಂತೆ ಹೆಚ್ಚಿನ ಚರ್ಚೆಗಳಲ್ಲಿ ಕನಿಷ್ಠ ಶೇಕಡಾ 80ರಷ್ಟು ಶಾಸಕರು ಭಾಗವಹಿಸಿದರು ಎಂದರು. 

ಹಲವು ವಿಧೇಯಕಗಳು ಅಂಗೀಕಾರಗೊಂಡಿದ್ದು, ಎರಡು ಪ್ರಮುಖವಾದವು ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಮತ್ತು ಶಿವಮೊಗ್ಗದ ವಿಮಾನ ನಿಲ್ದಾಣಗಳಿಗೆ ನಾಮಕರಣ ಮತ್ತು ಇನ್ನೊಂದು ವಕೀಲರ ರಕ್ಷಣೆಗಾಗಿ ಎಂದು ಅವರು ಹೇಳಿದರು. ವಿಧಾನಮಂಡಲದ ಅಧಿವೇಶನ ಹೊರತುಪಡಿಸಿ ವರ್ಷದ ಬಹುತೇಕ ಭಾಗ ಖಾಲಿ ಇರುವ ಸುವರ್ಣ ವಿಧಾನಸೌಧವನ್ನು ಸದುಪಯೋಗಪಡಿಸಿಕೊಂಡು ವಿವಿಧ ಸೌಲಭ್ಯಗಳನ್ನು ಕಲ್ಪಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದರು.

ಸುವರ್ಣ ಸೌಧದಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಬೆಂಗಳೂರಿನ ವಿಧಾನಸೌಧವನ್ನು ಹೋಲುವ ಭವ್ಯವಾದ ರಚನೆಯು ವಾರಾಂತ್ಯದಲ್ಲಿ ಪ್ರಕಾಶಿಸಲ್ಪಡುತ್ತದೆ ಎಂದು ಅವರು ಹೇಳಿದರು. ಸುವರ್ಣಸೌಧದಲ್ಲಿ ಶಾಸಕರ ಭವನ ನಿರ್ಮಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದರು. 

ಇಂತಹ ದೊಡ್ಡ ಕಟ್ಟಡವನ್ನು ನಿರ್ವಹಿಸುವುದು ಕಷ್ಟಸಾಧ್ಯವಾದ ಕಾರಣ ನಾವು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಅಥವಾ ಆದಾಯ-ಹಂಚಿಕೆ ಮಾದರಿಯಲ್ಲಿ ವರ್ಷವಿಡೀ ಬಳಸಿಕೊಳ್ಳಲಾಗುವುದು ಎಂದರು. ಕಳೆದ 10 ದಿನಗಳಲ್ಲಿ 27,000 ವಿದ್ಯಾರ್ಥಿಗಳು ಮತ್ತು 14,500 ಸಾರ್ವಜನಿಕರು ಬೆಳಗಾವಿ ಸುವರ್ಣ ಸೌಧಕ್ಕೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT