ಪ್ರತಾಪ್ ಸಿಂಹ 
ರಾಜ್ಯ

ಸಂಸತ್ ಭದ್ರತಾ ಲೋಪ: ಪೊಲೀಸರಿಂದ ಪ್ರತಾಪ್ ಸಿಂಹ ಹೇಳಿಕೆ ದಾಖಲು ಸಾಧ್ಯತೆ

ಸಂಸತ್ ಮೇಲೆ ಹೊಗೆ ಬಾಬ್ ದಾಳಿ ನಡೆಸಿದ ಇಬ್ಬರಿಗೆ ಸಂಸತ್ ಪ್ರವೇಶದ ಪಾಸು ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ.

ನವದೆಹಲಿ/ಮೈಸೂರು: ಸಂಸತ್ ಮೇಲೆ ಹೊಗೆ ಬಾಬ್ ದಾಳಿ ನಡೆಸಿದ ಇಬ್ಬರಿಗೆ ಸಂಸತ್ ಪ್ರವೇಶದ ಪಾಸು ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ.

ಪ್ರತಾಪ್ ಸಿಂಹ ಅವರು ಲಖನೌನ ಸಾಗರ್ ಶರ್ಮಾ ಮತ್ತು ಮೈಸೂರಿನ ಡಿ.ಮನೋರಂಜನ್ ಅವರಿಗೆ ಡಿ.13ರಂದು ಲೋಕಸಭೆ ಕಲಾಪ ವೀಕ್ಷಣೆಯ ಪಾಸು ನೀಡಿದ್ದರು. ಈ ಇಬ್ಬರೂ ಸಂಸತ್ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿ ಗದ್ದಲ ಎಬ್ಬಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಹೇಳಿಕೆ ಪಡೆಯಲು ವಿಶೇಷ ಸೆಲ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಪಾಸ್ ಗಾಗಿ ಮನೋರಂಜನ್ ಕಳೆದ ಮೂರು ತಿಂಗಳಿನಿಂದ ಪ್ರತಾಪ್ ಸಿಂಹ ಅವರ ಕಚೇರಿಗೆ ಭೇಟಿ ನೀಡಿ ಹಲವು ಬಾರಿ ಮನವಿ ಮಾಡಿದ್ದ. ಮೈಸೂರಿನ ನಿವಾಸಿ ಎಂದು ಹೇಳಿ ಪಾಸ್ ಪಡೆದುಕೊಂಡಿದ್ದ. ಸಾಮಾನ್ಯವಾಗಿ ಮೈಸೂರಿನವರು ಎಂದರೆ ಪ್ರತಾಪ್ ಸಿಂಹ ಅವರ ಮನವಿಗೆ ಸ್ಪಂದಿಸುವುದು ಹೆಚ್ಚು ಎಂದು ಮೂಲಗಳು ಮಾಹಿತಿ ನೀಡಿವೆ.

ಈ ನಡುವೆ ಪ್ರತಾಪ್ ಸಿಂಹ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನ ಒಳಗೆ ಹಾಗೂ ಹೊರಗೆ ಪ್ರತಿಭಟನನೆಗಳನ್ನು ನಡೆಸುತ್ತಿದ್ದರೂ, ಪ್ರತಾಪ್ ಸಿಂಹ ಅವರು ಇದೂವರೆಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಆದರೆ, ಘಟನೆ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದರು.

ಘಟನೆ ಬಳಿಕ ಸಂಸತ್ತಿನ ಭದ್ರತೆಯನ್ನು ಪರಿಶೀಲಿಸಲು ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ಖಚಿತಪಡಿಸಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲು 'ಉನ್ನತ ಸಮಿತಿ'ಯನ್ನು ರಚಿಸಿದ್ದೇನೆ ಎಂದು ಬಿರ್ಲಾ ಶನಿವಾರ ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದಾರೆ.

ಏತನ್ಮಧ್ಯೆ, ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಅವರನ್ನು ಶನಿವಾರ ಬಂಧಿಸಲಾಗಿದ್ದು,  ನಂತರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ಕಾಲಪೊಲೀಸ್ ಕಸ್ಟಡಿಗೆ ನೀಡಿದೆ.

ಘಟನೆಯ ದಿನದಂದು ಮಹೇಶ್ ಮಾಸ್ಟರ್ ಮೈಂಡ್ ಲಲಿತ್ ಝಾ ಮತ್ತು ಕೈಲಾಶ್ ಎಂಬ ಆರೋಪಿಗಳೊಂದಿಗೆ ಸಂಸತ್ತಿನ ಹೊರಗಿದ್ದ. ಘಟನೆಯ ನಂತರ, ಮಹೇಶ್ ಮತ್ತು ಲಲಿತ್ ಝಾ ಇಬ್ಬರೂ ರಾಜಸ್ಥಾನಕ್ಕೆ ಪಲಾಯನ ಮಾಡಿದ್ದರು. ನಂತರ ಮಹೇಶ್ ಹೆಸರಿನಲ್ಲಿ ಹೋಟೆಲ್‌ ರೂಮ್ ಬುಕ್ ಮಾಡಿಕೊಂಡು ಅಲ್ಲಿಯೇ ತಂಗಿದ್ದರು. ಬಳಿಕ ರಾಜಸ್ಥಾನದಲ್ಲಿ ಮೊಬೈಲ್ ಫೋನ್ ನಾಶಪಡಿಸಲು ಮಹೇಶ್ ಝಾಗೆ ಮಹೇಶ್ ಸಹಾಯ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಇದರ ಬೆನ್ನಲ್ಲೇ ಮಹೇಶ್ ವಿರುದ್ಧ ಕ್ರಿಮಿನಲ್ ಸಂಚು ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಸೆಲ್ ಪೂರ್ವಾನುಮತಿ ಇಲ್ಲದೆ ನಗರವನ್ನು ತೊರೆಯದಂತೆ ಮನೋರಂಜನ್ ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿದೆ.

ಈ ನಡುವೆ ಘಟನೆ ವೇಳೆ ಆರೋಪಿಗಳು ಬಳಸಿದ್ದ ಶೂ ಹಾಗೂ ಬಣ್ಣದ ಹೊಗೆ ಡಬ್ಬಿಗಳ ಪತ್ತೆ ಮಾಡಲು ದೆಹಲಿ ಪೊಲೀಸರು ಲಖನೌ ಹಾಗೂ ಲಾತೂರ್ ಗೆ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT