ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೂವರ ಸಾವು

ನಗರದಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 18 Dec 2023, 1:09 pm

ಬೆಂಗಳೂರು: ನಗರದಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವತಿಯೊಬ್ಬಳು ಮೃತಪಟ್ಟಿದ್ದಾರೆ.

ಮೃತ ಯುವತಿಯನ್ನು ಬಾನು ಬಿ ಎಂದು ಗುರ್ತಿಸಲಾಗಿದೆ. ಭಾನುವಾರ ಮುಂಜಾನೆ 4.20ಕ್ಕೆ ತನ್ನ ಸ್ನೇಹಿತರೊಂದಿಗೆ ಬೆಟ್ಟಹಲಸೂರಿಗೆ ಟ್ರೆಕ್ಕಿಂಗ್ ಹೋಗಿದ್ದರು. ಟೆಕ್ಕಿಂಗ್ ಮುಗಿಸಿ ಏರ್‌ಪೋರ್ಟ್ ರಸ್ತೆಯಲ್ಲಿರುವ ತನ್ನ ಕಚೇರಿಯತ್ತ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ಹೊಡೆದ ಕಾರನ್ನು ಇನ್ನು ಪೊಲೀಸರು ಪತ್ತೆ ಮಾಡಿಲ್ಲ.

Advertisement

Advertisement

ಮತ್ತೊಂದು ಅಪಘಾತದಲ್ಲಿ 87 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.

ಇದನ್ನ ಓದಿ: ಬೆಂಗಳೂರು: ನಾಲ್ಕು ಕಡೆ ಪ್ರತ್ಯೇಕ ಅಪಘಾತ, ಐವರ ಸಾವು

ರಾಮಕೃಷ್ಣ ರಾವ್‌ ಮೃತ ವ್ಯಕ್ತಿಯಾಗಿದ್ದಾರೆ. ಜಯನಗರ 4ನೇ ಬ್ಲಾಕ್‌ನ 16ನೇ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ 5.30ಕ್ಕೆ ರಸ್ತೆ ದಾಟುತ್ತಿದ್ದಾಗ ಬೈಕ್‌ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಜಯನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ಲಾರಿ ಪಲ್ಟಿಯಾದ ಪರಿಣಾಮ 51 ವರ್ಷದ ಚಾಲಕ ಮೃತಪಟ್ಟಿದ್ದಾರೆ.

ತಮಿಳುನಾಡು ಮೂಲದ ಮೃತ ಚಿನ್ನಣ್ಣ ಮೃತ ವ್ಯಕ್ತಿ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬನ್ನೇರುಘಟ್ಟ ಟೋಲ್ ಗೇಟ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೈಸ್ ರಸ್ತೆಯಲ್ಲಿ ರಸ್ತೆಯ ಬಲಬದಿಯಲ್ಲಿ ನಿಂತಿದ್ದ ಕಸದ ಲಾರಿಯನ್ನು ತಪ್ಪಿಸಲು ಚಿನ್ನಣ್ಣ ಅವರು ಪ್ರಯತ್ನಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement