ಸಾಂದರ್ಭಿಕ ಚಿತ್ರ 
ರಾಜ್ಯ

NIA Raid: ಕರ್ನಾಟಕ ಸೇರಿ 4 ರಾಜ್ಯಗಳ 19 ಕಡೆಗಳಲ್ಲಿ ಎನ್ ಐಎ ದಾಳಿ; ಐಸಿಸ್ ಸಂಪರ್ಕ ಜಾಲ ಬೇಧ

ದೇಶಾದ್ಯಂತ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಇಂದು ವಾರದ ಆರಂಭದಲ್ಲಿಯೇ ತನ್ನ ಬೇಟೆ ಮುಂದುವರಿಸಿದೆ.

ನವದೆಹಲಿ/ಬೆಂಗಳೂರು: ದೇಶಾದ್ಯಂತ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ(NIA) ದಾಳಿ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಇಂದು ವಾರದ ಆರಂಭದಲ್ಲಿಯೇ ತನ್ನ ಬೇಟೆ ಮುಂದುವರಿಸಿದೆ.

ಇಂದು ಕೂಡ ಕರ್ನಾಟಕದ 11 ಭಾಗಗಳು ಸೇರಿದಂತೆ 4 ರಾಜ್ಯಗಳ 19 ಕಡೆಗಳಲ್ಲಿ ಎನ್ ಐಎ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಆಫ್ ಸಿರಿಯಾ ಮತ್ತು ಇರಾಕ್ (ISIS) ಜಾಲದೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿ ಆಧಾರದ ಮೇಲೆ ಮೂಲಭೂತವಾದಿ ಜಿಹಾದಿ ಸಂಪರ್ಕಜಾಲವನ್ನು ಬೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಕರ್ನಾಟಕದಲ್ಲಿ ಕೇಂದ್ರ ಉಗ್ರಗಾಮಿ ನಿಗ್ರಹ ಪಡೆ ಬೆಂಗಳೂರು, ಬಳ್ಳಾರಿಯ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸಿದೆ. ಜಾರ್ಖಂಡ್ ನ ನಾಲ್ಕು ಕಡೆಗಳಲ್ಲಿ, ಮಹಾರಾಷ್ಟ್ರದ ಮೂರು ಕಡೆ ಮತ್ತು ದೆಹಲಿಯಲ್ಲಿ ಒಂದು ಕಡೆ ದಾಳಿ ಮಾಡಲಾಗಿದ್ದು ಈ ವೇಳೆ ಲೆಕ್ಕಕ್ಕೆ ಸಿಗದ ನಗದು, ಡಿಜಿಟಲ್ ಸಾಧನಗಳು, ಸೂಕ್ಷ್ಮ ವಸ್ತುಗಳು ಸೇರಿದಂತೆ ಹಲವು ದಾಖಲೆಗಳನ್ನು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಲ್ಲಿ ಏನೇನು ಸಿಕ್ಕಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಸಿಗಬೇಕಿದೆ. 

ಬೆಂಗಳೂರು ನಗರದ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ಹಾಗೂ ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಂತೆ, ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಮಿವುಲ್ಲಾ ವಾಸವಿದ್ದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದಾಗ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ.

ಹಲವರನ್ನು ವಶಕ್ಕೆ ಪಡೆದ ಎನ್​ಐಎ: ದಾಳಿ ವೇಳೆ ಶಮಿವುಲ್ಲಾ, ಸೂಫಿಯಾನ್ ಆಗಿ ಮತಾಂತರಗೊಂಡಿದ್ದ ನಿಖಿಲ್, ನಿಷೇಧಿತ ಪಿಎಫ್​ಐ ಬಳ್ಳಾರಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸುಲೇಮಾನ್, ಅಜಾಜ್ ಅಹ್ಮದ್, ತಬ್ರೇಜ್, ಮುಜಾಮಿಲ್ ಎಂಬುವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಭಾರತದಲ್ಲಿ ಇದುವರೆಗೆ ಐಸಿಸ್ ಜಾಲದಲ್ಲಿ ನಡೆದ ತನಿಖೆಯಿಂದ ಈ ಅಂಶ ಬೆಳಕಿಗೆ ಬಂದಿದ್ದು, ಕೆಲವು ವಿದೇಶಿಯರು ಮುಸ್ಲಿಂ ಯುವಕರನ್ನು ಜಿಹಾದಿಗಳನ್ನಾಗಿ ಪರಿವರ್ತಿಸಲು ನೋಡುತ್ತಿರುವುದು, ತಮ್ಮ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿ ಅಸ್ಥಿರತೆಯ ಭಾವವನ್ನು ಸೃಷ್ಟಿಸಲು ನೋಡುತ್ತಿರುವುದು ಬೆಳಕಿಗೆ ಬಂದಿದೆ. 

ಕಳೆದ ವಾರ ಬೆಂಗಳೂರಿನ ವಿವಿಧೆಡೆ ಎನ್‌ಐಎ ದಾಳಿ ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಲಷ್ಕರ್-ಎ-ತೊಯ್ಬಾದಿಂದ ಕೆಲವು ಕೈದಿಗಳ ಆಮೂಲಾಗ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣ (ಎಲ್‌ಇಟಿ) ಭಯೋತ್ಪಾದಕ ಮತ್ತು ಜೀವಾವಧಿ ಅಪರಾಧಿ - ಟಿ ನಜೀರ್ ಪ್ರಕರಣದಲ್ಲಿ ಬಂಧಿಸಲಾಯಿತು. ನಜೀರ್ 2008ರ ಸರಣಿ ಸ್ಫೋಟಗಳಲ್ಲಿ ಭಾಗಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. 

ಕಳೆದ ವಾರ ಮಹಾರಾಷ್ಟ್ರದ 40 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್ ಐಎ 15 ಮಂದಿಯನ್ನು ಬಂಧಿಸಿತ್ತು. ಇವರಲ್ಲಿ ಒಬ್ಬ
ಬಂಧಿತ ಆರೋಪಿ ಐಸಿಸ್ ಘಟಕ ನಾಯಕ ಎಂದು ಹೇಳಲಾಗಿದೆ.ಈತ ಮೂಲಭೂತವಾದಿಗಳನ್ನಾಗಿ ಯುವಕರ ಮನಪರಿವರ್ತಿಸಿ ಭಯೋತ್ಪಾದಕ ಸಂಘಟನೆಗೆ ನೇಮಿಸುವವರಲ್ಲಿ ಪ್ರಮುಖ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT