ಸಾಂಕೇತಿಕ ಚಿತ್ರ 
ರಾಜ್ಯ

ಮತ್ತೆ ಕೊರೋನಾತಂಕ: ರಾಜ್ಯದಲ್ಲಿ ಇಂದು 44 ಮಂದಿಗೆ ಪಾಸಿಟಿವ್, ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಟೆಸ್ಟಿಂಗ್ ಹೆಚ್ಚಿಸಲು ತೀರ್ಮಾನಿಸಿದೆ. 

ಬೆಂಗಳೂರು: ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಟೆಸ್ಟಿಂಗ್ ಹೆಚ್ಚಿಸಲು ತೀರ್ಮಾನಿಸಿದೆ. 

ಈ ಮಧ್ಯೆ ರಾಜ್ಯದಲ್ಲಿ ಇಂದು ಒಂದೇ ದಿನ 44 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರರೊಂದಿಗೆ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ಇಂದು ಆಸ್ಪತ್ರೆಯಿಂದ 35 ಮಂದಿ ಡಿಸ್ಜಾರ್ಜ್​ ಆಗಿದ್ದು, ರಾಜ್ಯದಲ್ಲಿ ಒಟ್ಟು 79 ಸಕ್ರಿಯ ಕೊರೋನಾ ಕೇಸ್​ಗಳಿನೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ.6.09ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್1 ರೂಪಾಂತರಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಔಷಧ, ಆಕ್ಸಿಜನ್​​, ಬೆಡ್​​ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೇ ಕೊವಿಡ್ ಟೆಸ್ಟ್​ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ