ರಾಜ್ಯ

ವಿಜಯಪುರ: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರ ವ್ಯಾಪಾರ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ

Ramyashree GN

ವಿಜಯಪುರ: ವಿಜಯಪುರ ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಧಾರ್ಮಿಕ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಮತ್ತು ಶ್ರೀರಾಮಸೇನೆ ಸದಸ್ಯರು ಮಂಗಳವಾರ ಒತ್ತಾಯಿಸಿದ್ದಾರೆ.

ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿದರೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಈ ಜಾತ್ರೆಯು ನೂರು ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಮಕರ ಸಂಕ್ರಾಂತಿಯ ಸಮಯದಲ್ಲಿ ನಡೆಯುತ್ತದೆ. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಗಣನೀಯ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವುದರಿಂದ ಈಗಾಗಲೇ ಸಿದ್ಧತೆಗಳು ಪ್ರಾರಂಭವಾಗಿವೆ.

ಇದಕ್ಕೂ ಮುನ್ನ ದೇವಸ್ಥಾನದ ಮುಂದೆ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದರು.

ರಾಜ್ಯದಲ್ಲಿನ ಹಿಂದೂ ದೇವಾಲಯದ ಆವರಣ ಮತ್ತು ಧಾರ್ಮಿಕ ಜಾತ್ರೆಗಳಲ್ಲಿ ಮುಸ್ಲಿಂ ಮಾರಾಟಗಾರರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲ. ಸಿದ್ದೇಶ್ವರ ಸಂಕ್ರಮಣ ಜಾತ್ರೆಯಲ್ಲೂ ಇದೇ ರೀತಿಯ ನಿರ್ಧಾರ ಕೈಗೊಳ್ಳಬೇಕು ಎಂದು ಹಿಂದೂ ಕಾರ್ಯಕರ್ತರು ಒತ್ತಾಯಿಸಿದರು.

SCROLL FOR NEXT