ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಇಬ್ಬರು ಸಹೋದ್ಯೋಗಿಗಳೊಂದಿಗೆ ಪತ್ನಿ ಚಕ್ಕಂದ; ವಾಟ್ಸಾಪ್ ಸ್ಟೇಟಸ್ ಹಾಕಿ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ!

ತನ್ನ ಇಬ್ಬರು ಸಹೋದ್ಯೋಗಿಗಳೊಂದಿಗೆ ಪತ್ನಿಯ ಅಕ್ರಮ ಸಂಬಂಧ ಹೊಂದಿರುವುದನ್ನು ತಿಳಿದು ಮನನೊಂದ 45 ವರ್ಷದ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ತನ್ನ ಇಬ್ಬರು ಸಹೋದ್ಯೋಗಿಗಳೊಂದಿಗೆ ಪತ್ನಿಯ ಅಕ್ರಮ ಸಂಬಂಧ ಹೊಂದಿರುವುದನ್ನು ತಿಳಿದು ಮನನೊಂದ 45 ವರ್ಷದ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರಿನ ಕೊರಟಗೆರೆಯ ರಮೇಶ್ ಮೃತ ದುರ್ದೈವಿ, ಎಂಎನ್ ಹಳ್ಳಿಯ ಲಕ್ಷ್ಮೀಪುರ ನಿವಾಸಿ ರಮೇಶ್ ತಮ್ಮ ಪತ್ನಿ ಜೊತೆ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು, ಅವರ ಜೊತೆಗೆ ಕೆಲಸ ಮಾಡುತ್ತಿದ್ದ ಇಬ್ಬರು ಸಹೋದ್ಯೋಗಿಗಳೊಂದಿಗೆ ರಮೇಶ್ ಪತ್ನಿ ಶಿಲ್ಪಾ ಅಕ್ರಮ ಸಂಬಂಧ ಹೊಂದಿದ್ದಳು. ಇದನ್ನು ಮನಗಂಡ ರಮೇಶ್ ತನ್ನ ಪತ್ನಿ ಮತ್ತು ಇಬ್ಬರು ಸಹೋದ್ಯೋಗಿಗಳ ಹೆಸರನ್ನು ವಾಟ್ಸಾಪ್ ಸ್ಟೇಟಸ್ ಗೆ ಹಾಕಿ ಭಾನುವಾರ ಬೆಳಗ್ಗೆ 10.30ಕ್ಕೆ ಸೋಲದೇವನಹಳ್ಳಿ ಬಳಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಸಾವಿಗೆ ಶರಣಾಗಿದ್ದಾರೆ. ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಆತನ ಪತ್ನಿ ಶಿಲ್ಪಾ, ಸಂಜು ಹಾಗೂ ಮತ್ತೊಬ್ಬ ಸಹೋದ್ಯೋಗಿಯನ್ನು ಯಶವಂತಪುರ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಫ್ಯಾಕ್ಟರಿಯಲ್ಲಿ ರಮೇಶ್ ತನ್ನ ಹೆಂಡತಿಯನ್ನ ಕೆಲಸದ ಸ್ಥಳದಲ್ಲಿ ಭೇಟಿಯಾದನು,  ನಂತರ ಇಬ್ಬರು 2004 ರಲ್ಲಿ ವಿವಾಹವಾದರು. ರಮೇಶ್ ಆತನ ಪತ್ನಿ ಮತ್ತು ಇಬ್ಬರು ಆರೋಪಿಗಳು ಒಂದೇ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ರಮೇಶ್ ಆತ್ಮಹತ್ಯೆ ಮಾಡಿಕೊಂಡ ನಂತರ, ಹಳಿಗಳ ಮೇಲೆ ಅಪರಿಚಿತ ಶವವಿರುವ ಬಗ್ಗೆ ಯಶವಂತಪುರ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದಾಗ ರಮೇಶ್ ಶವದ ಪಕ್ಕದಲ್ಲಿದ್ದ ಮೊಬೈಲ್ ಗೆ ಕರೆ ಬಂದಿತ್ತು.

ಪೊಲೀಸರು ಉತ್ತರಿಸಿದಾಗ, ಕರೆ ಮಾಡಿದವರು ತಾವು ರಮೇಶ್  ಸಂಬಂಧಿಕರು ಎಂದು ಹೇಳಿ ವಾಟ್ಸಾಪ್ ಸ್ಟೇಟಸ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳು ರಮೇಶ್ ಜತೆ ನಿಕಟ ಸ್ನೇಹಿತರಾಗಿದ್ದು, ಅವರ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದರು. ಪತ್ನಿ ಜತೆಗಿನ ಅಕ್ರಮ ಸಂಬಂಧ ರಮೇಶನಿಗೆ ಗೊತ್ತಿರಲಿಲ್ಲ. ದಂಪತಿಗೆ ಪದವಿ ವ್ಯಾಸಂಗ ಮಾಡುತ್ತಿರುವ ಮಗಳಿದ್ದಾಳೆ. ಮೂವರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT