ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
ರಾಜ್ಯ

'ಲಿಂಗಾಯತ ಒಂದು ಜಾತಿ ಅಲ್ಲ; ನಾನು ದೇವಾಲಯಕ್ಕೆ ಹೋಗೋದು ಶಿಲ್ಪ ಸೌಂದರ್ಯ ನೋಡಲು, ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ'

ನಾನು ಗುಡಿ ಗೋಪುರಗಳಿಗೆ ಹೋಗುವುದು ಶಿಲ್ಪದ ಸೌಂದರ್ಯ ನೋಡುವುದಕ್ಕೆ. ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆ: ನಾನು ಗುಡಿ ಗೋಪುರಗಳಿಗೆ ಹೋಗುವುದು ಶಿಲ್ಪದ ಸೌಂದರ್ಯ ನೋಡುವುದಕ್ಕೆ. ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ. ದೇವಸ್ಥಾನಗಳ ಶಂಕುಸ್ಥಾಪನೆ, ಭೂಮಿ ಪೂಜೆ, ಕಳಶಾರೋಹಣ ಕಾರ್ಯಕ್ರಮಗಳಲ್ಲಿ  ಭಾಗವಹಿಸುವುದಿಲ್ಲ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಸೇವಾ ದೀಕ್ಷೆ ಹಾಗೂ ಶರಣ ಚಿಂತನ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಲಿಂಗಾಯತ ಒಂದು ಜಾತಿ ಅಲ್ಲ, ಅದೊಂದು ತತ್ವ, ಸಿದ್ಧಾಂತ. ಯಾರು ಆ ತತ್ವಕ್ಕೆ ಅನುಗುಣವಾಗಿ ಅಂಗದ ಮೇಲೆ ಲಿಂಗ ಧರಿಸಿ ಪೂಜೆ ಮಾಡುತ್ತಾರೋ ಅವರು ಮಾತ್ರ ಲಿಂಗಾಯತರು. ಹುಟ್ಟಿನಿಂದ ಲಿಂಗಾಯತತನ ಬರುವುದಿಲ್ಲ.

ಅದು ಸಾಧನೆ ಹಾಗೂ ಅರಿವಿನ ಮೂಲಕ ಬರುತ್ತದೆ. ಹಾಗಾಗಿ ಆ ಅರಿವನ್ನು ಮೈಗೂಡಿಸಿಕೊಳ್ಳಬೇಕು, ನನ್ನ ತಂದೆ- ತಾಯಿ ಲಿಂಗಾಯತರು ಹಾಗಾಗಿ ನಾನು ಕೂಡ ಲಿಂಗಾಯತ ಅಂದರೆ ಆಗಲ್ಲ. ಲಿಂಗಸಾಧನೆ ಮೂಲಕ ಲಿಂಗಾಯತರು ಆಗಬೇಕು ಎಂದು ಹೇಳಿದರು. ಈ ಮೂಲಕ ಎಲ್ಲರೂ ಲಿಂಗಪೂಜೆ ಮತ್ತು ಲಿಂಗ ದೀಕ್ಷೆಯ ಅನುಸಾರ ತತ್ವ ಸಿದ್ದಾಂತದಂತೆ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಸವ ಪರಂಪರೆಯನ್ನು ಒಪ್ಪಿಕೊಳ್ಳುವವರು ವೈದಿಕ ಪರಂಪರೆಯಿಂದ ದೂರವಿರಬೇಕು. ಎರಡೂ ಬೇಕೆನ್ನುವುದನ್ನು ಶರಣ ತತ್ವ ಒಪ್ಪುವುದಿಲ್ಲ, ನಾನು ಗುಡಿ ಗೋಪುರಗಳಿಗೆ ಹೋಗುವುದು ಶಿಲ್ಪದ ಸೌಂದರ್ಯ ನೋಡುವುದಕ್ಕೆ. ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ. ದೇವಸ್ಥಾನಗಳ ಶಂಕುಸ್ಥಾಪನೆ, ಭೂಮಿ ಪೂಜೆ, ಕಳಶಾರೋಹಣ ಕಾರ್ಯಕ್ರಮಗಳಲ್ಲಿ  ಭಾಗವಹಿಸುವುದಿಲ್ಲ. ಇದನ್ನು ಟೀಕಿಸುವವರು ಬಹಳಷ್ಟು ಮಂದಿ ಇದ್ದಾರೆ. ನಮಗೆ ಟೀಕೆ ಮುಖ್ಯವಲ್ಲ. ಬದ್ಧತೆ ಮುಖ್ಯ’ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

ಕೆಲ ವಚನಗಳಲ್ಲಿ ಅಡಕವಾಗಿರುವ ಸತ್ಯವನ್ನು ಬಿಡಿಸಿ ಹೇಳಿದರೆ ಬಹಳಷ್ಟು ಮಂದಿಯ ಕಣ್ಣು ಕೆಂಪಾಗುತ್ತದೆ. ಕಲ್ಲು ದೇವರು ದೇವರೇ ಅಲ್ಲ ಎಂಬುದು ಬಸವಣ್ಣನವರ ವಚನದ ಸಾರ. ಆದರೆ, ಬಹುಪಾಲು ಮಂದಿ ಕಲ್ಲು, ಮಣ್ಣು, ಮರದ ದೇವರನ್ನು ಪೂಜಿಸುತ್ತಾರೆ. ಶರಣ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಇಷ್ಟಲಿಂಗ ಪೂಜೆ ಮಾಡುವ ಭಾವನೆ ಬೆಳೆಸಿಕೊಳ್ಳಬೇಕು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT