ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

ಬೆಂಗಳೂರು ಸುರಂಗ ಯೋಜನೆ: 30 ಸಾವಿರ ಕೋಟಿ ರೂ. ನೆರವು ಕೋರಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಡಿಕೆಶಿ

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರೊಂದಿಗೆ ಸಭೆ ನಡೆಸಿದರು ಮತ್ತು ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ನೆರವು ನೀಡುವಂತೆ ಕೋರಿದರು.

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಭೆ ನಡೆಸಿದರು ಮತ್ತು ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ನೆರವು ನೀಡುವಂತೆ ಕೋರಿದರು.

ಶಿವಕುಮಾರ್ ಅವರು ಕರ್ನಾಟಕದ ಜಲ ಸಂಪನ್ಮೂಲ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಧ್ಯಸ್ಥಿಕೆ, ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದ್ದಾರೆ.

ಸಭೆಯಲ್ಲಿ ಸೀತಾರಾಮನ್ ಅವರಿಗೆ ಸಲ್ಲಿಸಿದ ಪತ್ರದಲ್ಲಿ, 'ಬೆಂಗಳೂರನ್ನು ವಿಶ್ವದ ಅತ್ಯಂತ ವಾಸಯೋಗ್ಯ ನಗರಗಳಲ್ಲಿ ಒಂದನ್ನಾಗಿ ಮಾಡಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಆದಾಗ್ಯೂ, ಹಣ, ಸಂಪನ್ಮೂಲಗಳು ಮತ್ತು ವಿವಿಧ ಸಂಸ್ಥೆಗಳೊಂದಿಗಿನ ಸಮನ್ವಯಕ್ಕೆ ಸಂಬಂಧಿಸಿದಂತೆ ಹಲವಾರು ಸವಾಲುಗಳು ಮತ್ತು ನಿರ್ಬಂಧಗಳನ್ನು ಎದುರಿಸುತ್ತಿದ್ದೇವೆ' ಎಂದಿದ್ದಾರೆ.

ಮುಂದುವರಿದು, 'ನಗರದಲ್ಲಿನ ಸಂಚಾರ ದಟ್ಟಣೆ ನಿವಾರಿಸಲು ಸುರಂಗಗಳ ನಿರ್ಮಾಣ ಮಾಡಲು, ವಿಶ್ವಬ್ಯಾಂಕ್ ನಿಧಿಯ ಮೂಲಕ ಸಾರ್ವಜನಿಕ ಸಾರಿಗೆಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಬೆಂಗಳೂರು ಮೆಟ್ರೋ ರೈಲು ನಿಗಮದ ರೈಲು ಜಾಲ ವಿಸ್ತರಣೆಗೆ ಮತ್ತು ಪ್ರವಾಹದ ಪರಿಣಾಮವನ್ನು ತಗ್ಗಿಸಲು ಕ್ರಮಗಳನ್ನು ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸುವಲ್ಲಿ ನಿಮ್ಮ ಮಧ್ಯಸ್ಥಿಕೆ ಮತ್ತು ಸಹಾಯವನ್ನು ನಾವು ಬಯಸುತ್ತೇವೆ' ಎಂದು ಅವರು ಹೇಳಿದರು.

'ನಗರದಲ್ಲಿ ನಾವು 60 ಕಿಮೀ ಉದ್ದದ ಸುರಂಗವನ್ನು ನಿರ್ಮಿಸಲು ಪ್ರಸ್ತಾಪಿಸಿದ್ದೇವೆ. ಇದು ನಗರದೊಳಗೆ ಪೂರ್ವ-ಪಶ್ಚಿಮ ಮತ್ತು ಉತ್ತರ-ದಕ್ಷಿಣ ಕಾರಿಡಾರ್ ಅನ್ನು ರಚಿಸುತ್ತದೆ. ಪ್ರಮುಖ ರಸ್ತೆಗಳನ್ನು ಸಂಪರ್ಕಿಸುತ್ತದೆ ಮತ್ತು ಮೇಲ್ಮೈ ದಟ್ಟಣೆಯನ್ನು ನಿವಾರಿಸುತ್ತದೆ' ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

'ಯೋಜನೆಯ ಅಂದಾಜು ವೆಚ್ಚ 30,000 ಕೋಟಿ ರೂ. ಆಗಿದ್ದು, ಪ್ರತಿ ಕಿಮೀಗೆ 500 ಕೋಟಿ ರೂ. ತಗಲುತ್ತದೆ. ಈ ಸುರಂಗವು ಭೂಗತವಾಗಿರುತ್ತದೆ, ಮೇಲ್ಮೈ ಜಾಗವನ್ನು ಮತ್ತು ಸೌಂದರ್ಯವನ್ನು ಉಳಿಸುತ್ತದೆ. ಈ ಯೋಜಿತ ಯೋಜನೆಯು NH 7 ಅನ್ನು NH 14 ನೊಂದಿಗೆ ಸಂಪರ್ಕಿಸುವುದರಿಂದ, ಇದನ್ನು ಎನ್ಎಚ್ಎಐ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಬಹುದಾಗಿದೆ. ಅಗತ್ಯವಿರುವ ಹಣವನ್ನು ಕರ್ನಾಟಕ ಸರ್ಕಾರ ಮತ್ತು ಎನ್ಎಚ್ಎಐ ಎರಡಕ್ಕೂ ಕೇಂದ್ರ ಬಜೆಟ್‌ನಿಂದ ದಯೆಯಿಂದ ಮಂಜೂರು ಮಾಡಬಹುದು' ಎಂದಿದ್ದಾರೆ.

ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಪರಿಶೀಲಿಸಲು ಮತ್ತು ಮೌಲ್ಯಮಾಪನ ಮಾಡಲು ಜಲಶಕ್ತಿ ಸಚಿವಾಲಯದ ಅಧಿಕಾರಿಗಳಿಗೆ ನಿರ್ದೇಶಿಸಲು ಮತ್ತು ಕಾವೇರಿ ಜಲವಿವಾದಗಳ ನ್ಯಾಯಮಂಡಳಿಯ (ಸಿಡಬ್ಲ್ಯುಡಿಟಿ) ಸಂಬಂಧಿಸಿದ ಮಾರ್ಗಸೂಚಿಗಳು ಮತ್ತು ನಿಯಮಗಳಿಗೆ ಅನುಸಾರವಾಗಿ ಅನುಮೋದಿಸಲು ವಿನಂತಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. 

ಇದರೊಂದಿಗೆ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೇಂದ್ರದ ನೆರವು ಮತ್ತು ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೋರಿದ್ದಾರೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ 9,177.32 ಕೋಟಿ ರೂ. ಅನುದಾನ ನೀಡುವಂತೆಯೂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT