ಸಿದ್ದರಾಮಯ್ಯರಿಂದ ಅಮಿತ್ ಶಾ ಭೇಟಿ 
ರಾಜ್ಯ

ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ ಭೇಟಿ; ಶೀಘ್ರ ಬರ ಪರಿಹಾರ ಬಿಡುಗಡೆಗೆ ಆಗ್ರಹ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ...

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇಂದು ಸಂಸತ್ ಸಂಕೀರ್ಣದಲ್ಲಿರುವ ಅವರ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಕರ್ನಾಟಕಕ್ಕೆ ಬರ ಪರಿಹಾರ ಅನುಮೋದಿಸಲು ಉನ್ನತ ಮಟ್ಟದ ಸಮಿತಿಯ ಕೇಂದ್ರ ಸಭೆಯನ್ನು ಶೀಘ್ರ ಕರೆಯಬೇಕು ಎಂದು ಮನವಿ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳಲ್ಲಿ ಬರಗಾಲದಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ಹೆಚ್ಚು ಹಾನಿಗೊಳಗಾಗಿದ್ದಾರೆ ಎಂದು ಸಿಎಂ ಸಭೆಯಲ್ಲಿ ತಿಳಿಸಿದರು.

48.19 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬಿತ್ತಿದ ಬೆಳೆ ಹಾನಿಯಾಗಿದೆ. ಮೂರು ತಿಂಗಳ ಹಿಂದೆಯೇ ರಾಜ್ಯ ಸರ್ಕಾರ 18,177.44 ಕೋಟಿ ರೂ. ಬರ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬರ ಪರಿಹಾರ ಮಂಜೂರು ಮಾಡುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್‌ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮನವಿ ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.

ಇದೇ ವಿಚಾರವಾಗಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ