ಕೆಎಸ್ ಆರ್ ಟಿಸಿ 
ರಾಜ್ಯ

ಕ್ರಿಸ್ಮಸ್ ರಜೆ: ಕೆಎಸ್‌ಆರ್‌ಟಿಸಿಯಿಂದ 1000 ಹೆಚ್ಚುವರಿಯಾಗಿ 1000 ಬಸ್‌ಗಳ ವ್ಯವಸ್ಥೆ

ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ.

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ. ಅಲ್ಲದೆ, ರಾಜ್ಯದ ಪ್ರಮುಖ ಸ್ಥಳಗಳ ನಡುವೆಯೂ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಡಿಸೆಂಬರ್‌ 22 , 23 ಹಾಗೂ 24 ಬೆಂಗಳೂರಿನಿಂದ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಸದ್ಯ ಲಭ್ಯವಿರುವ ಬಸ್‌ಗಳ ಓಡಾಟದ ಜೊತೆಗೆ ಹೆಚ್ಚುವರಿಯಾಗಿ 1,000 ವಿಶೇಷ ಬಸ್‌ಗಳು ಓಡಲಿದೆ.

ಕ್ರಿಸ್‌ಮಸ್‌ ರಜೆ ಮುಗಿದ ಬಳಿಕ ಬೇರೆ ಬೇರೆ ಸ್ಥಳಗಳಿಂದ ಮತ್ತೆ ಬೆಂಗಳೂರಿಗೆ ವಾಪಸ್‌ ಆಗುವವರಿಗೆ ಡಿಸೆಂಬರ್‌ 25 ರಂದು ವಿವಿಧ ರಾಜ್ಯದ ವಿವಿಧ ಸ್ಥಳಗಳಿಂದ ಹಾಗೂ ಹೊರ ರಾಜ್ಯಗಳಿಂದ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ಎಲ್ಲಾ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಬೆಂಗಳೂರಿನ ಯಾವ ನಿಲ್ದಾಣಗಳಿಂದ ಎಲ್ಲಿಗೆ ಬಸ್‌?: ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ: ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಸಂಚಾರ ಮಾಡಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೊರಡಲಿದೆ.

ಶಾಂತಿನಗರ ಬಸ್‌ ನಿಲ್ದಾಣ: ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿದೆ.

ಶೇ 10 ರಷ್ಟು ರಿಯಾಯಿತಿ: ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್‌ ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT