ರಾಮಲಿಂಗಾ ರೆಡ್ಡಿ 
ರಾಜ್ಯ

ಕೋವಿಡ್ ಆತಂಕ: ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ- ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಲ್ ಆರ್ ಟಿಸಿ ಮತ್ತಿ ಬಿಎಂಟಿಸಿ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್  ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಲ್ ಆರ್ ಟಿಸಿ ಮತ್ತಿ ಬಿಎಂಟಿಸಿ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ಆರ್‌ಟಿಸಿ  ಮತ್ತು ಬಿಎಂಟಿಸಿಯಲ್ಲಿ  ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.

ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!