ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು 24 ಜನರಿಗೆ ಕೊರೋನಾ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 24 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,174 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

1,791 RT-PCR ಸೇರಿದಂತೆ ಒಟ್ಟು 2,263 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 24 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿಯೇ 23 ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 93 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ವರದಿಯಾಗಿದೆ.

ಇಂದು ಆಸ್ಪತ್ರೆಯಿಂದ 11 ಮಂದಿ ಡಿಸ್ಜಾರ್ಜ್​ ಆಗಿದ್ದು, ರಾಜ್ಯದಲ್ಲಿ ಒಟ್ಟು 105 ಸಕ್ರಿಯ ಕೊರೋನಾ ಕೇಸ್​ಗಳಿನೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

105 ಪ್ರಕರಣಗಳಲ್ಲಿ, 85 ಜನರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಮತ್ತು 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ 20 ಮಂದಿಯಲ್ಲಿ ಒಂಬತ್ತು ಮಂದಿ ಐಸಿಯುನಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

90ಕ್ಕೂ ಹೆಚ್ಚು ಗುಣಮಟ್ಟದ ಪರೀಕ್ಷೆ ನಡೆಸುತ್ತೇವೆ; ‘Bromate ನಿಗದಿತ ಮಿತಿಯಲ್ಲಿದೆ, ನಮ್ಮ ಕುಡಿಯುವ ನೀರು ಸುರಕ್ಷಿತ’: FSSAI ಕ್ರಮದ ಬೆನ್ನಲ್ಲೇ Bisleri ಸ್ಪಷ್ಟನೆ..!

ಫ್ರೀಡಂ ಪಾರ್ಕ್‌ನಲ್ಲಿ 7ನೇ ದಿನಕ್ಕೆ ಕಾಲಿಟ್ಟ ಧರಣಿಯಿಂದ ಬಿಗಡಾಯಿಸಿದ "ಆಶಾ" ಆರೋಗ್ಯ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ 17 ಕಾರ್ಯಕರ್ತೆಯರು

Gold Price: ಚಿನ್ನ, ಬೆಳ್ಳಿ ಬೆಲೆ ದಿಢೀರ್ ಭಾರಿ ಏರಿಕೆ; ಬೆಲೆ ವಿವರಗಳು ಇಂತಿವೆ...

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!