ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದರು. 
ರಾಜ್ಯ

ಬೆಂಗಳೂರು: ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದ ತುಷಾರ್‌ ಗಿರಿನಾಥ್‌

ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.

ಬೆಂಗಳೂರು: ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.

ನ.27ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಡಿ.9ರವರೆಗೆ ಆಕ್ಷೇಪಣೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು. ಇದಾದ ನಂತರ ಬಿಎಲ್‌ಓ ಮತ್ತು ಮೇಲ್ವಿಚಾರಕರು ಮತದಾರರ ಪಟ್ಟಿ ಪರಿಷ್ಕರಿಸುವ ಕಾರ್ಯ ಮಾಡಿದ್ದಾರೆ.

ಕೆಲ ಮನೆಗಳಿಗೆ ಭೇಟಿ ನೀಡಿದ ತುಷಾರ್ ಗಿರಿನಾಥ್ ಅವರು ಪರಿಷ್ಕರಿಸಿರುವ ಪಟ್ಟಿಯನ್ನು ‘ಸೂಪರ್‌ ಚೆಕ್ಕಿಂಗ್’ ಮಾಡಿದರು.

ಶಾಂತಿನಗರ ಹಾಗೂ ಶಿವಾಜಿನಗರದ ವಿಧಾನಸಭೆ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ನೀಡಲು ತುಷಾರ್‌ ಗಿರಿನಾಥ್‌ ಸೂಚಿಸಿದರು.

ಶಾಂತಿನಗರ ಹಾಗೂ ಶಿವಾಜಿನಗರದ ವಿಧಾನಸಭೆ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ನೀಡಲು ತುಷಾರ್‌ ಗಿರಿನಾಥ್‌ ಸೂಚಿಸಿದರು.

‘ಸೂಪರ್ ಚೆಕ್ಕಿಂಗ್ ಮಾಡಿ ಎಲ್ಲವೂ ಸರಿಯಿದ್ದು, ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ, ಒಂದು ಕಡೆ ಹೆಸರನ್ನು ತೆಗೆಸಬೇಕು’ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ವಿಶೇಷ ಆಯುಕ್ತ (ಚುನಾವಣೆ) ಆರ್ ರಾಮಚಂದ್ರನ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಸ್ನೇಹಲ್ ಆರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT