ಸಿಎಂ ಸಿದ್ದರಾಮಯ್ಯ 
ರಾಜ್ಯ

ಊಹಾ- ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ತರಾಟೆ

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. 

ಮೈಸೂರು: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. 

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ?  ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಹೇಳಿದರು. 

ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು. 

ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.

ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದ ಅವರು, ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ, ಅದಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT