ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಕಲಿ ಆಸ್ತಿ ಪತ್ರದ ಮೇಲೆ 3 ಕೋಟಿ ರೂಪಾಯಿ ಸಾಲ ಪಡೆದಿದ್ದ ಐವರ ಬಂಧನ

ಮಹಿಳೆಯೊಬ್ಬರ ಆಸ್ತಿಯ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಮೂರು ಬ್ಯಾಂಕ್‌ಗಳಲ್ಲಿ ಮೂರು ಕೋಟಿ ರೂಪಾಯಿ ಸಾಲ ಪಡೆದಿದ್ದ ಐವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆಯೊಬ್ಬರ ಆಸ್ತಿಯ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಮೂರು ಬ್ಯಾಂಕ್‌ಗಳಲ್ಲಿ ಮೂರು ಕೋಟಿ ರೂಪಾಯಿ ಸಾಲ ಪಡೆದಿದ್ದ ಐವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರದ 6ನೇ ಹಂತದ ನಿವಾಸಿ ಅಂಬುಜಾಕ್ಷಿ ನಾಗರಕಟ್ಟಿ (75) ಎಂಬುವರು 1,350 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ ನಿರ್ಮಿಸಿದ್ದ ಮನೆಯನ್ನು ಮಾರಾಟ ಮಾಡಿ ಮಗನ ಜೊತೆ ವಿದೇಶದಲ್ಲಿ ವಾಸಿಸಲು ನಿರ್ಧರಿಸಿದ್ದರು ಎಂದು ಮೂಲಗಳು ತಿಳಿಸಿವೆ. 

ಇದನ್ನು ಅಂಬುಜಾಕ್ಷಿ ತನ್ನ ನೆರೆಹೊರೆಯವರ ಬಳಿ ಹೇಳಿದ್ದಾಳೆ. ಶೀಘ್ರದಲ್ಲೇ,  ಅವರ ನೆರೆಹೊರೆಯವರಲ್ಲಿ ಒಬ್ಬರಾದ ಮಂಜುನಾಥ್ ತನ್ನ ಸ್ನೇಹಿತ ಭಾಸ್ಕರ್ ಕೃಷ್ಣ ಮನೆಯನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿ ಅವರನ್ನು ಸಂಪರ್ಕಿಸಿದ್ದಾರೆ.  ಕೃಷ್ಣ ಅಂಬುಜಾಕ್ಷಿಯನ್ನು ಭೇಟಿಯಾಗಿದ್ದು, ಆಸ್ತಿಗಾಗಿ 10,000 ರೂ. ಮುಂಗಡ ಹಣವನ್ನಾಗಿ ನೀಡಿದ್ದಾರೆ. ಕಾನೂನು ಅನುಮತಿ ಪಡೆಯಬೇಕು ಎಂದು ಆಕೆಯಿಂದ ಆಸ್ತಿ ದಾಖಲೆಗಳ ನಕಲು ಪ್ರತಿಗಳನ್ನು ತೆಗೆದುಕೊಂಡಿದ್ದಾರೆ. 

ಕೆಲವು ದಿನಗಳ ನಂತರ, ಕೃಷ್ಣ  ಮಹೇಶ್ ಮತ್ತು ಇತರ ಸ್ನೇಹಿತರೊಂದಿಗೆ ಬ್ಯಾಂಕ್ ಅಧಿಕಾರಿಗಳಂತೆ ಅಂಬುಜಾಕ್ಷಿಯ ಮನೆಗೆ ಹೋಗಿದ್ದಾರೆ. ಆಗ ತನಗೆ ಬ್ಯಾಂಕ್‌ ಲೋನ್‌ ಬೇಕು , ಅದಕ್ಕಾಗಿ ಆಕೆಯ ಸಹಿ ಬೇಕು ಎಂದು ಕೃಷ್ಣ ಹೇಳಿದಾಗ, ಬ್ಯಾಂಕ್‌ ಉದ್ಯೋಗಿಯಾಗಿದ್ದ ಅಂಬುಜಾಕ್ಷಿ ಆತನ ಉದ್ದೇಶವನ್ನು ಪ್ರಶ್ನಿಸಿ ತನ್ನ ಆಸ್ತಿಯನ್ನು ಆತನಿಗೆ ಮಾರಲು ನಿರಾಕರಿಸಿದ್ದಾರೆ. 

ನಂತರ ಅಂಬುಜಾಕ್ಷಿ ಅವರ ಹೆಸರಿನಲ್ಲಿ ಈಗಾಗಲೇ ಮೂರು ಬ್ಯಾಂಕ್‌ಗಳಲ್ಲಿ 3 ಕೋಟಿ ರೂಪಾಯಿ ಸಾಲ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಬ್ಯಾಂಕ್‌ಗಳಿಂದಲೂ ಹಣ ಡ್ರಾ ಮಾಡಿಕೊಂಡಿದ್ದರು. ಪ್ರಕರಣದ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT