ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಪೌರಕಾರ್ಮಿಕರ ಸಮಸ್ಯೆ ಅರಿವು ಸರ್ಕಾರಕ್ಕಿದೆ, ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ: ಡಿ ಕೆ ಶಿವಕುಮಾರ್

ಪೌರಕಾರ್ಮಿಕರ ಸಮಸ್ಯೆ ಅರಿವು ಸರ್ಕಾರಕ್ಕಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಪೌರಕಾರ್ಮಿಕರ ಸಮಸ್ಯೆ ಅರಿವು ಸರ್ಕಾರಕ್ಕಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಪೌರಾಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿ ಮಾತನಾಡಿದ ಅವರು, ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ನೀವು ಹೋರಾಟ ಹಮ್ಮಿಕೊಂಡಿದ್ದೀರಿ.ಇದು ನಿಮ್ಮ ಬದುಕಿಗಾಗಿ ನಡೆಯುತ್ತಿರುವ ಹೋರಾಟ. ಈ ಹಿಂದಿನ ಸರ್ಕಾರ ಚುನಾವಣೆಗೆ ಮುನ್ನ ನಿಮ್ಮ ಜತೆ ಮಾತುಕತೆಗೆ ಮುಂದಾದರೂ ಆ ಮಾತುಕತೆ ವಿಫಲವಾಯಿತು. ನಂತರ ನೀವೆಲ್ಲರೂ ನಮಗೆ ಬೆಂಬಲ ನೀಡಿ ಆಶೀರ್ವಾದ ಮಾಡಿದ್ದೀರಿ. ಹೀಗಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ನಿಮ್ಮ ಪರಿಸ್ಥಿತಿ ಬಗ್ಗೆ ನಮಗೆ ಅರಿವಿದೆ ಎಂದು ತಿಳಿಸಿದರು.

'ನಮ್ಮ ಪ್ರಣಾಳಿಕೆಯಲ್ಲಿ ಅನೇಕ ಭರವಸೆಗಳನ್ನು ಸೇರಿಸಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದೇವೆ. ಇದಕ್ಕಾಗಿ ಸುಮಾರು 60 ಸಾವಿರ ಕೋಟಿಯನ್ನು ನಿಗದಿ ಮಾಡಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ. ಸದ್ಯದಲ್ಲೇ ನಿಮ್ಮ ಪದಾಧಿಕಾರಿಗಳ ಹಾಗೂ ಅಧಿಕಾರಿಗಳ ಸಭೆ ಕರೆಯುತ್ತೇನೆ. ಸರ್ಕಾರ ಹಾಗೂ ನಿಮಗೆ ಒಳ್ಳೆಯದಾಗುವಂತೆ ಆರ್ಥಿಕ ಪರಿಸ್ಥಿತಿ ಹಾಗೂ ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ಮಾಡಲಿದೆ ಎಂದು ಭರವಸೆ ನೀಡಿದರು.

ನಗರದ ಸ್ವಚ್ಛತೆ ಕಾಪಾಡುತ್ತಾ ನಿಮ್ಮ ಬದುಕಿನಲ್ಲಿ ಸ್ವಾಭಿಮಾನದಿಂದ ದೇಶ ಸೇವೆ ಮಾಡುತ್ತಿದ್ದೀರಿ. ನಿಮ್ಮ ಬೇಡಿಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ