ಪುನೀತ್ ಕೆರೆಹಳ್ಳಿ 
ರಾಜ್ಯ

ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ: ಸಿಬ್ಬಂದಿಗೆ ಬೆದರಿಕೆ; ಪುನೀತ್ ಕೆರೆಹಳ್ಳಿ ವಿರುದ್ಧ FIR

ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕ್ರಿಸ್ಮಸ್​ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್​​ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್ಐಆರ್​​ ದಾಖಲಾಗಿದೆ. ಬ್ಯಾಟರಾಯನಪುರದ ಮಾಲ್​ ಆಫ್​ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್​ ಮ್ಯಾನೇಜರ್​​ ಸ್ಟೀಫನ್​ ವಿಕ್ಟರ್​​ ನೀಡಿರುವ ದೂರಿನ ಅನ್ವಯ ಕೊಡಿಗೆಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲಗಳ ಪ್ರಕಾರ ಡಿಸೆಂಬರ್​​ 23 ರಂದು ಮಧ್ಯಾಹ್ನ ಬ್ಯಾಟರಾಯನಪುರದ ಮಾಲ್​​ ಆಫ್​​ ಏಷ್ಯಾ ಬಳಿ ತೆರಳಿದ್ದ ಪುನೀತ್ ಕೆರೆಹಳ್ಳಿ ಮತ್ತವರ ಬೆಂಬಲಿಗರು, ಮಾಲ್ ಒಳಗೆ ಕ್ರಿಸ್ಮಸ್ ಟ್ರೀ ಪ್ರದರ್ಶನ ಹಾಗೂ ಅದಕ್ಕೆ 200 ರೂ. ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿದ್ದಾರೆ. ಈ ವೇಳೆ ಮಾಲ್‌ನ‌ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಬಳಿ ವಾಗ್ವಾದ ನಡೆಸಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಡಿಸೆಂಬರ್ 25 ಹಾಗೂ 31ರಂದು ಅದೇ ರೀತಿ ಗಲಾಟೆ ಮಾಡುವುದಾಗಿ ತಿಳಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸದ್ಯ ಮಾಲ್‌ನ‌ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ನೀಡಿರುವ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರ ವಿರುದ್ಧ ಕೊಡಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!