ಸಿದ್ದರಾಮಯ್ಯ 
ರಾಜ್ಯ

ಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ.  ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.  ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಂದೇಶ ರವಾನಿಸಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ