ದಿನೇಶ್ ಗುಂಡೂರಾವ್ 
ರಾಜ್ಯ

ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ನಾಳೆ ಸಂಪುಟ ಉಪಸಮಿತಿ ಸಭೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿಯು ಡಿಸೆಂಬರ್ 26ರಂದು ಸಭೆ ಸೇರಲಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿಯು ಡಿಸೆಂಬರ್ 26ರಂದು ಸಭೆ ಸೇರಲಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸದ್ಯಕ್ಕೆ ಯಾವುದೇ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ ಎಂದು ಅವರು ಸೂಚಿಸಿದರು. ಆದರೆ ಜನರು ಜಾಗರೂಕರಾಗಿರಬೇಕು ಅಥವಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ನಾವು COVID ಪರೀಕ್ಷೆಗಳನ್ನು ಹೆಚ್ಚಿಸಿದಂತೆ, ಪ್ರಕರಣಗಳು ಹೆಚ್ಚಾಗುತ್ತಿವೆ. ನಮ್ಮ TAC ನಿನ್ನೆ ಸಭೆ ನಡೆಸಿತ್ತು ಎಂದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಜನರು ಜಾಗರೂಕರಾಗಿರಿ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದು ಬಿಟ್ಟರೆ ಸದ್ಯಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಈಗಿನಂತೆ (ಹೊಸ ವರ್ಷ ಆಚರಣೆ ಮತ್ತು ಇತರ ಚಟುವಟಿಕೆಗಳಲ್ಲಿ) ಯಾವುದೇ ನಿರ್ಬಂಧಗಳಿಲ್ಲ, ಅಂತಹ ಪರಿಸ್ಥಿತಿ ಇಲ್ಲ ಎಂದು ನಾನು ಭಾವಿಸುತ್ತೇನೆ. ಜೆಎನ್.1 ಉಪವಿಭಾಗವು ಎಲ್ಲೆಡೆ ಪ್ರಚಲಿತದಲ್ಲಿದ್ದರೂ ದೇಶ ಅಥವಾ ಜಗತ್ತಿನಲ್ಲಿ ಎಲ್ಲಿಯೂ ಯಾವುದೇ ನಿರ್ಬಂಧವಿಲ್ಲ. ಅಂತಹ ಯಾವುದೇ ನಿರ್ಬಂಧಗಳಿಲ್ಲ ಎಂದು ಅವರು ಹೇಳಿದರು.

ಕರ್ನಾಟಕ ಸರ್ಕಾರವು ಇತ್ತೀಚೆಗೆ ಕೋವಿಡ್-19 ನಿರ್ವಹಣೆಗಾಗಿ ರಾವ್ ನೇತೃತ್ವದ ನಾಲ್ಕು ಸದಸ್ಯರ ಸಂಪುಟ ಉಪಸಮಿತಿಯನ್ನು ರಚಿಸಿತ್ತು. 1,441 ಪರೀಕ್ಷೆಗಳನ್ನು ಮಾಡಲಾಗಿತ್ತು. ಕರ್ನಾಟಕದಲ್ಲಿ ನಿನ್ನೆ 106 ಹೊಸ ಕೋವಿಡ್ ಸೋಂಕಿನ ಪ್ರಕರಣಗಳನ್ನು ವರದಿಯಾಗಿದ್ದು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 344ಕ್ಕೆ ಏರಿಕೆಯಾಗಿದೆ. ಬೆಂಗಳೂರು ಮಾತ್ರ 95 ಹೊಸ ಪ್ರಕರಣಗಳನ್ನು ವರದಿಯಾಗಿತ್ತು.

ಕೋವಿಡ್ ವಿಚಾರದಲ್ಲಿ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರ ಆರೋಪವನ್ನು ತಳ್ಳಿಹಾಕಿದ ಗುಂಡೂರಾವ್, ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಲ್ಲಿ ಕರ್ನಾಟಕ ಸರ್ಕಾರದಷ್ಟು ಪೂರ್ವಭಾವಿಯಾಗಿ ದೇಶದ ಇತರೆ ಯಾವುದೇ ಸರ್ಕಾರ ಮಾಡಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT