ಕಲ್ಲಡ್ಕ ಪ್ರಭಾಕರ್ ಭಟ್ 
ರಾಜ್ಯ

ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್

ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಮಂಡ್ಯ: ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿರುವ ಅವರು, ನಿಮಗೆ ತಲಾಕ್ ಹೇಳುವ ಅವಕಾಶ ಇತ್ತು. ಪ್ರಧಾನಿ ಮೋದಿಯವರ ಸರ್ಕಾರದಿಂದ ತ್ರಿವಳಿ ತಲಾಕ್ ರದ್ದಾಗಿದೆ ಎಂದು ತಿಳಿಸಿದರು. ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವ ಎಂದು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ. ನಮ್ಮನ್ನ ಯಾಕೆ ಟಾರ್ಗೆಟ್ ಮಾಡುತ್ತಿರಾ? ಮೋದಿ ಸರ್ಕಾರ ಬಂದ ಮೇಲೆ ತಲಾಖ್ ಬಂತು. ಅವರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ ಎಂದರು.

ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಾಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು. ದೇವರ ಧಯೆ ಅವನಿಗೆ ಶಿಕ್ಷೆ ಆಯಿತು. ಅವನಿಗೂ ಬೆಂಬಲ ವ್ಯಕ್ತಪಡಿಸಿದ್ರು. ಆದರೂ ನಾವು ಸುಮ್ಮನೇ ಇರಬೇಕಾ ಎಂದು ಪ್ರಶ್ನಿಸಿದರು.

ಬಹು ಪತ್ನಿತ್ವ ಪಿಡುಗು ಹಾಗೂ ತಲಾಕ್ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಳಳಿಗೆ ಶಾಶ್ವತ ಪತಿ ಇರಲಿಲ್ಲ. ದಿ ಕೇಳರ ಸ್ಟೋರಿ, ಕಾಶ್ಮೀರ ಫೈಲ್ಸ್ ಸಿನೆಮಾ ನೋಡಿ. ಮತಾಂತರ, ಹಿಂದೂಗಳ ಮೇಲಿನ ದೌರ್ಜನ್ಯ ತೋರಿಸಿದ್ದಾರೆ. ಮುಸ್ಲಿಂ ಹುಡುಗರಲ್ಲ, ಯುವತಿಯರು ಮೋಸ ಮಾಡುತ್ತಿದ್ದಾರೆ. ದಿ ಕೇರಳ ಸ್ಟೋರಿ ಮೂವಿಯಲ್ಲಿ ಈ ಬಗ್ಗೆ ತೋರಿಸಿದ್ದಾರೆ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಗುಡುಗಿದರು.

ಅಂಬೇಡ್ಕರ್ ದೇಶ ವಿಭಜನೆ ಮಾಡಬೇಡಿ ಅಂದಿದ್ದರು. ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT