ಪಲ್ಟಿಯಾದ ಕೆಎಸ್ ಆರ್ ಟಿಸಿ ಬಸ್ 
ರಾಜ್ಯ

ಹಾವೇರಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; 45 ವಿದ್ಯಾರ್ಥಿಗಳಿಗೆ ಗಾಯ, ನಾಲ್ವರು ಗಂಭೀರ

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ರಾಯಚೂರು: ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53 ವಿದ್ಯಾರ್ಥಿಗಳು ಮತ್ತು 6 ಮಂದಿ ಶಿಕ್ಷಕರು ಸರ್ಕಾರಿ ಬಸ್‌ ಬುಕ್‌ ಮಾಡಿಕೊಂಡು ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ವೀಕ್ಷಿಸಲು ತೆರಳುತ್ತಿದ್ದರು.

ಬೇವಿನಹಳ್ಳಿ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ.

ಬೆನ್ನು ಮೂಳೆ ಮುರಿತಕ್ಕೊಳಗಾದ ಡ್ರೈವರ್ ಮಲಪ್ಪ ಹೊಸೂರು ಮತ್ತು ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಾದ ವಿವ್ಯಾ ಸಜ್ಜಲಗುಡ್ಡ, ಸವಿತಾ ರವಿ ರೆಡ್ಡಿ, ಗುರು ಗೌಡ ಎಂಬವರನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸಣ್ಣ ಪುಟ್ಟ ಗಾಯಗಳಾದ ವಿದ್ಯಾರ್ಥಿಗಳನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT