ರಾಜ್ಯ

ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ

Ramyashree GN

ಮಂಗಳೂರು: ಮಂಗಳೂರು-ಮಡಗಾಂವ್ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಮಂಗಳವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರು ಮತ್ತು ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ಸೆಂಟ್ರಲ್‌ನಿಂದ ಬೆಳಗ್ಗೆ 8.30ಕ್ಕೆ ಹೊರಟ ರೈಲು ಮಧ್ಯಾಹ್ನ 1.15ಕ್ಕೆ ಮಡಗಾಂವ್‌ ತಲುಪಲಿದೆ. ಮಧ್ಯಾಹ್ನ 1.45ಕ್ಕೆ ಮಡಗಾಂವ್‌ನಿಂದ ಹೊರಟು ಸಂಜೆ 6.30ಕ್ಕೆ ಮಂಗಳೂರು ತಲುಪಲಿದೆ.

ಈ ರೈಲಿಗೆ ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇದೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ನಿಯಮಿತ ಕಾರ್ಯಾಚರಣೆ ಡಿಸೆಂಬರ್ 30 ರಂದು ಪ್ರಾರಂಭವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತರ ರಾಜ್ಯಗಳ ಆರು ವಂದೇ ಭಾರತ್ ರೈಲುಗಳೊಂದಿಗೆ ಈ ಹೊಸ ರೈಲನ್ನು ಉದ್ಘಾಟಿಸುವ ನಿರೀಕ್ಷೆಯಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

SCROLL FOR NEXT