ನಾರಾಯಣಗೌಡ ಸಾಂದರ್ಭಿಕ ಚಿತ್ರ 
ರಾಜ್ಯ

ಕರವೇ ನಾರಾಯಣಗೌಡ, ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗೆ ಆರ್. ಅಶೋಕ್ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಯಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಯಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅಶೋಕ್, ಮಾಲ್ ಆಫ್ ಏಷ್ಯಾದಲ್ಲಿ ಕನ್ನಡ ನಾಮಫಲಕ ಇಲ್ಲದ ಮಳಿಗೆಗಳಲ್ಲಿ ಸರ್ಕಾರದ ಅಧಿಕೃತ ಸೂಚನೆಯಂತೆ ಕನ್ನಡ ನಾಮಫಲಕ ಅಳವಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ಕರವೇ ರಾಜ್ಯಾಧ್ಯಕ್ಷ  ಕೆ.ನಾರಾಯಣಗೌಡರಿಗೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬೆಳವಣಿಗೆ ಅತ್ಯಂತ ಖಂಡನೀಯವಾಗಿದ್ದು, ಕನ್ನಡದ ನೆಲ, ಜಲ, ಭಾಷೆಗಾಗಿ ಹೋರಾಡುವವರ ದನಿ ಅಡಗಿಸಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳನ್ನ ಪತ್ತೆಹಚ್ಚಿ ಕಾನೂನಿನ ವಶಕ್ಕೆ ಒಪ್ಪಿಸಬೇಕು ಮತ್ತು ನಾರಾಯಣಗೌಡರಿಗೆ ಹಾಗೂ ಕರವೇ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ