ಸಂಗ್ರಹ ಚಿತ್ರ 
ರಾಜ್ಯ

ಫೆ.2ರಿಂದ ಹಂಪಿ ಉತ್ಸವ: ಅಗತ್ಯ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಸೂಚನೆ

ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.

ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ